WhatsApp Telegram Group

ರಾಜ್ಯದಲ್ಲಿ ವಿವಿಧ ಹುದ್ದೆಗಳಿಗೆ ಬೃಹತ್ ನೇಮಕಾತಿ 2021


ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕರ್ನಾಟಕದಾದ್ಯಂತ ಹಲವು ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ವತಿಯಿಂದ ಸಮುದಾಯ ಆರೋಗ್ಯ ಅಧಿಕಾರಿ (ಸಿಹೆಚ್‌ಒ) ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಗತ್ಯ ಮಾಹಿತಿಗಳನ್ನು ಈ ಕೆಳಗಿನಂತೆ ನೀಡಲಾಗಿದೆ.

ಹುದ್ದೆಗಳನ್ನು ಭರ್ತಿ ಮಾಡಲಿರುವ ಜಿಲ್ಲೆಗಳು
ಬೀದರ್, ಬಳ್ಳಾರಿ, ಕಲಬುರ್ಗಿ, ರಾಯಚೂರು, ಚಿಕ್ಕಮಗಳೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಉತ್ತರ ಕನ್ನಡ, ಯಾದಗಿರಿ ಜಿಲ್ಲೆಗಳಿಗೆ (ಹೆಚ್ಚಿನ ಆಧ್ಯತೆ ಜಿಲ್ಲೆಗಳು), ಹಾವೇರಿ, ಕೋಲಾರ, ಬೆಳಗಾವಿ, ತುಮಕೂರು, ಮೈಸೂರು, ದಕ್ಷಿಣ ಕನ್ನಡ, ಮಂಡ್ಯ, ಉಡುಪಿ, ಚಿಕ್ಕಬಳ್ಳಾಪುರ, ಕೊಡಗು, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಈ ಹುದ್ದೆಗಳನ್ನು ನೇಮಕ ಮಾಡಲಾಗುತ್ತದೆ.

In Article ad

ಹುದ್ದೆಯ ಹೆಸರು: ಸಮುದಾಯ ಆರೋಗ್ಯ ಅಧಿಕಾರಿಗಳು(ಸಿಹೆಚ್‌ಒ)

ಹುದ್ದೆಯ ಸಂಖ್ಯೆ 3006

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ ನರ್ಸಿಂಗ್ / ಪೋಸ್ಟ್‌ ಬಿಎಸ್ಸಿ ನರ್ಸಿಂಗ್ ಜತೆಗೆ ರಾಜ್ಯ ನರ್ಸಿಂಗ್ ಕೌನ್ಸಿಲ್‌ ಕೆಎನ್‌ಸಿ/ಐಎನ್‌ಸಿ ಅಲ್ಲಿ ನೋಂದಣಿ ಪಡೆದಿರಬೇಕು.

(ಇತರೆ ಅರ್ಹತೆಗಳುಅಭ್ಯರ್ಥಿಗಳು ಕರ್ನಾಟಕದಲ್ಲಿ ಕನಿಷ್ಠ 10 ವರ್ಷ ವಾಸವಿರಬೇಕು. ಹಾಗೂ ಕನ್ನಡವನ್ನು ಒಂದು ಭಾಷೆಯಾಗಿ ಎಸ್‌ಎಸ್‌ಎಲ್‌ಸಿ / 10ನೇ ತರಗತಿಯಲ್ಲಿ ಅಭ್ಯಾಸಿಸಿರಬೇಕು. ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಪ್ರಾವಿಣ್ಯತೆ ಹೊಂದಿರಬೇಕು.)

In Article ad

 

 

ವಯೋಮಿತಿ 
ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ, ಎಸ್‌ಸಿ / ಎಸ್‌ಟಿ / ಪ್ರವರ್ಗ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 40 ವರ್ಷ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

In Article ad

ವೇತನ ಶ್ರೇಣಿ: ರೂ.22,000 ಜತೆಗೆ ರೂ.8000 ವರೆಗೆ ಪ್ರೋತ್ಸಾಹಧನ ನೀಡಲಾಗುತ್ತದೆ. ಹೆಚ್ಚಿನ ಆಧ್ಯತೆಯುಳ್ಳ ಜಿಲ್ಲೆಗಳಲ್ಲಿ ಈ ಹುದ್ದೆಗೆ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಮಾಸಿಕ ರೂ.24,200 ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಆನ್‌ಲೈನ್‌ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 27-09-2021
ಅನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 18-10-2021 ರ ಸಂಜೆ 5 ಗಂಟೆವರೆಗೆ.
ಲಿಖಿತ ಪರೀಕ್ಷೆ ಮತ್ತು ಫಲಿತಾಂಶ ಪ್ರಕಟಣೆ ದಿನಾಂಕ: 23-10-2021
ಮೂಲ ದಾಖಲೆಗಳ ಪರಿಶೀಲನೆ ಪ್ರಾರಂಭ ದಿನಾಂಕ: 26-10-2021

Website 
Noification 
Apply Online 

 

In Article ad

ಜಿಲ್ಲಾವಾರು ಉದ್ಯೋಗ ಮಾಹಿತಿ

close button