ರಾಜ್ಯ ಸರ್ಕಾರದಿಂದ `ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲೋಮಾ’ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ

Telegram Group

ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲೋಮಾ ಕೋರ್ಸ್ ಗಳ ಪ್ರಥಮ ಮತ್ತು ದ್ವಿತೀಯ ವರ್ಷದ ಪರೀಕ್ಷೆಗಳನ್ನು ಈಗಾಗಲೇ ರದ್ದು ಮಾಡಲಾಗಿದ್ದು, ಈ ಕಾರಣಕ್ಕಾಗಿ ಮುಂದಿನ ಸೆಮಿಸ್ಟರ್ ಪರೀಕ್ಷಾ ಶುಲ್ಕದಲ್ಲಿ ಶೇ. 50 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ತಿಳಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಕೋವಿಡ್ 19 ಹಿನ್ನೆಲೆ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲೋಮಾ ಕೋರ್ಸ್ ಗಳ ಪ್ರಥಮ ಮತ್ತು ದ್ವಿತೀಯ ವರ್ಷದ ಪರೀಕ್ಷೆಗಳನ್ನು ರದ್ದು ಮಾಡಿರುವುದರಿಂದ ಮುಂದಿನ ಸೆಮಿಸ್ಟರ್ ಪರೀಕ್ಷಾ ಶುಲ್ಕದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲು ತೀರ್ಮಾನಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

ಪರೀಕ್ಷೆ ಸಂಬಂಧ ಕೆಲವು ವಿಶ್ವವಿದ್ಯಾಲಯಗಳು ಈಗಾಗಲೇ ವಿದ್ಯಾರ್ಥಿಗಳಿಂದ ಶುಲ್ಕ ಸಂಗ್ರಹಿಸಿದೆ. ಇದನ್ನು ವಾಪಸ್ ಕೊಡಿಸಿ ಎಂದು ವಿದ್ಯಾರ್ಥಿಗಳು ಮನವಿ ಸಲ್ಲಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ವರು ಪರೀಕ್ಷೆ ರದ್ದಾಗಿದ್ದರೂ ಕೂಡ ಮೌಲ್ಯ ಮಾಪನ ಪ್ರಕ್ರಿಯೆ ಇರುತ್ತದೆ. ಹೀಗಾಗಿ ಮುಂದಿನ ಸೆಮಿಸ್ಟರ್ ಪರೀಕ್ಷಾ ಶುಲ್ಕದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲಾಗುವುದು ಎಂದರು.



ಗ್ರಾಮೀಣ ಬ್ಯಾಂಕಿನಲ್ಲಿ 9638 ಹುದ್ದೆಗಳು

ಅಗ್ನಿಶಾಮಕ ಇಲಾಖೆಯಲ್ಲಿ 1567 ಹುದ್ದೆಗಳು

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಹುದ್ದೆಗಳು

Telegram Group
error: Content is protected !!