ಹೊಸ ನೇಮಕಾತಿ ಅಧಿಸೂಚನೆ 2022
DRDO Recruitment 2022: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಅಗತ್ಯವಿರುವ ಸ್ಟೆನೋಗ್ರಾಫರ್, ಫೈರ್‌ಮ್ಯಾನ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) |
ಹುದ್ದೆಗಳ ಹೆಸರು: | ಕೆಳಗೆ ವಿವರಿಸಲಾಗಿದೆ |
ಒಟ್ಟು ಹುದ್ದೆಗಳು | ಒಟ್ಟು 1061 ಹುದ್ದೆಗಳ ಭರ್ತಿ (DRDO) |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ಜೂನಿಯರ್ ಟ್ರಾನ್ಸ್ಲೇಷನ್ ಆಫೀಸರ್ | 33 |
ಸ್ಟೆನೋಗ್ರಾಫರ್ ಗ್ರೇಡ್ 1 | 215 |
ಸ್ಟೆನೋಗ್ರಾಫರ್ ಗ್ರೇಡ್ 2 | 123 |
ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ | 262 |
ಸ್ಟೋರ್ ಅಸಿಸ್ಟೆಂಟ್ | 138 |
ಸೆಕ್ಯೂರಿಟಿ ಅಸಿಸ್ಟೆಂಟ್ | 41 |
ವೆಹಿಕಲ್ ಆಪರೇಟರ್ | 145 |
ಫೈರ್ ಇಂಜಿನ್ ಡ್ರೈವರ್ | 18 |
ಫೈರ್‌ಮ್ಯಾನ್ | 86 |
ವಿದ್ಯಾರ್ಹತೆ:
ಜೂನಿಯರ್ ಟ್ರಾನ್ಸ್ಲೇಷನ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಸ್ನಾತಕೋತ್ತರ ಪದವಿ ಹೊಂದಿರಬೇಕು.
ಸ್ಟೆನೋಗ್ರಾಫರ್ ಗ್ರೇಡ್ 1 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ಅರ್ಹತೆ ಜೊತೆಗೆ ಟೈಪಿಂಗ್ ಜ್ಞಾನ ಹೊಂದಿರಬೇಕು.
ಸ್ಟೆನೋಗ್ರಾಫರ್ ಗ್ರೇಡ್ 2 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಜೊತೆಗೆ ಟೈಪಿಂಗ್ ಜ್ಞಾನ ಹೊಂದಿರಬೇಕು.
ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ & ಸ್ಟೋರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಜೊತೆಗೆ ನಿಗದಿತ ಟೈಪಿಂಗ್ ಜ್ಞಾನ ಹೊಂದಿರಬೇಕು.
ಸೆಕ್ಯೂರಿಟಿ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪಾಸ್ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.
ವೆಹಿಕಲ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10ನೇ ತರಗತಿ ಜೊತೆಗೆ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.
ಫೈರ್ ಇಂಜಿನ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10ನೇ ತರಗತಿ ಜೊತೆಗೆ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.
ಫೈರ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10ನೇ ತರಗತಿ ಪಾಸ್
ವಯೋಮಿತಿ:
ಜೂನಿಯರ್ ಟ್ರಾನ್ಸ್ಲೇಷನ್ ಆಫೀಸರ್, ಸ್ಟೆನೋಗ್ರಾಫರ್ ಗ್ರೇಡ್ 1 ಹುದ್ದೆಗಳಿಗೆ ಗರಿಷ್ಠ 30 ವರ್ಷ ವಯೋಮಿತಿ.
ಸ್ಟೆನೋಗ್ರಾಫರ್ ಗ್ರೇಡ್ 2, ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್, ಸ್ಟೋರ್ ಅಸಿಸ್ಟೆಂಟ್, ಸೆಕ್ಯೂರಿಟಿ ಅಸಿಸ್ಟೆಂಟ್, ಫೈರ್ ಇಂಜಿನ್ ಡ್ರೈವರ್, ಫೈರ್‌ಮ್ಯಾನ್ ಹುದ್ದೆಗಳಿಗೆ – ಕನಿಷ್ಠ 18 ವರ್ಷ, ಗರಿಷ್ಠ 27 ವರ್ಷ ವಯೋಮಿತಿ
ವೆಹಿಕಲ್ ಆಪರೇಟರ್ ಹುದ್ದೆಗಳಿಗೆ – ಗರಿಷ್ಠ 27 ವರ್ಷ ವಯೋಮಿತಿ
ಉದ್ಯೋಗ ಸುದ್ದಿ-10ನೇ ಪದವಿ ಆದವರಿಗೆ ಇಲ್ಲಿವೆ ಕಿರಿಯ ಸಹಾಯಕ ಹಾಗೂ ಸಿಪಾಯಿ ಹುದ್ದೆಗಳು
ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.19,900/- ರಿಂದ ರೂ.112400/-
ಅರ್ಜಿ ಶುಲ್ಕ:
ಅಭ್ಯರ್ಥಿಗಳು ರೂ. 100 ಶುಲ್ಕ ಪಾವತಿಸಬೇಕು. ಪ.ಜಾತಿ, ಪ.ಪಂಗಡ, ಮಹಿಳೆ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
(ಆನ್‌ಲೈನ್‌ನಲ್ಲಿ ಅರ್ಜಿ ಶುಲ್ಕ ಪಾವತಿಸಬಹುದು.)
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಆಯಾ ಹುದ್ದೆಗಳಿಗೆ ಅನುಗುಣವಾಗಿ ಸ್ಕಿಲ್/ ಫಿಸಿಕಲ್ ಫಿಟ್ನೆಸ್, ಸಾಮರ್ಥ್ಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ನವೆಂಬರ್ 07, 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಡಿಸೆಂಬರ್ 07, 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |