ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ರೈಲ್ವೆ ಇಲಾಖೆ ನೇಮಕಾತಿ 2022 | East Coast Railway Recruitment 2022

ಪೂರ್ವ ಕರಾವಳಿ ರೈಲ್ವೆ ಇಲಾಖೆ ನೇಮಕಾತಿ 2022

East Coast Railway Recruitment 2022: ಪೂರ್ವ ಕರಾವಳಿ ರೈಲ್ವೆ ಇಲಾಖೆಯಲ್ಲಿ ಅಗತ್ಯವಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 8 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, 12ನೇ ತರಗತಿ, ಬಿ.ಫಾರ್ಮಾ, ಡಿ.ಫಾರ್ಮಾ, ಬಿಎಸ್ಸಿ ನರ್ಸಿಂಗ್, GNM ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಜನವರಿ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

 

ಹುದ್ದೆಯ ಹೆಸರು: ಫಾರ್ಮಾಸಿಸ್ಟ್, ನರ್ಸಿಂಗ್ ಸೂಪರಿಂಟೆಂಡೆಂಟ್
ಒಟ್ಟು ಹುದ್ದೆಗಳು: 8 ಹುದ್ದೆಗಳಿಗೆ ಅರ್ಜಿ ಅಹ್ವಾನ
ವಿದ್ಯಾರ್ಹತೆ: 12ನೇ ತರಗತಿ, ಬಿ.ಫಾರ್ಮಾ, ಡಿ.ಫಾರ್ಮಾ, ಬಿಎಸ್ಸಿ ನರ್ಸಿಂಗ್, GNM
ಉದ್ಯೋಗದ ಸ್ಥಳ: ಭುವನೇಶ್ವರ
ಅರ್ಜಿ ಸಲ್ಲಿಕೆ: ಆಫ್​ಲೈನ್​ ಮೂಲಕ

ಉದ್ಯೋಗ ಸುದ್ದಿ: ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಅಹ್ವಾನ 

ಹುದ್ದೆಯ ಮಾಹಿತಿ:
ನರ್ಸಿಂಗ್ ಸೂಪರಿಂಟೆಂಡೆಂಟ್- 07
ಫಾರ್ಮಾಸಿಸ್ಟ್- 01
ಒಟ್ಟು 8 ಹುದ್ದೆಗಳು

ವಿದ್ಯಾರ್ಹತೆ:
ಈ ರೈಲ್ವೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ, ಫಾರ್ಮಾಸಿಸ್ಟ್, ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ 12ನೇ ತರಗತಿ, ಬಿಎಸ್ಸಿ ನರ್ಸಿಂಗ್ ಬಿ.ಫಾರ್ಮಾ, ಡಿ.ಫಾರ್ಮಾ, GNM ಪೂರ್ಣಗೊಳಿಸಿರಬೇಕು.

ವಯೋಮಿತಿ:
ನರ್ಸಿಂಗ್ ಸೂಪರಿಂಟೆಂಡೆಂಟ್- ಕನಿಷ್ಠ 20 ಗರಿಷ್ಠ 40 ವರ್ಷ
ಫಾರ್ಮಾಸಿಸ್ಟ್- ಕನಿಷ್ಠ 20 ಕನಿಷ್ಠ 35 ವರ್ಷ

ಉದ್ಯೋಗದ ಸ್ಥಳ:
ಈ ರೈಲ್ವೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ, ಫಾರ್ಮಾಸಿಸ್ಟ್, ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಒಡಿಶಾದ ಭುವನೇಶ್ವರದಲ್ಲಿ ಉದ್ಯೋಗ ನೀಡಲಾಗುತ್ತದೆ.

 

 

ವೇತನ ಶ್ರೇಣಿ:
ಈ ರೈಲ್ವೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ, ಫಾರ್ಮಾಸಿಸ್ಟ್, ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.

ಉದ್ಯೋಗ ಸುದ್ದಿ: ಲೆಕ್ಕಿಗರು-ಕಂ-ಕಛೇರಿ ಸಹಾಯಕರು ಹುದ್ದೆಗಳಿಗೆ ಅರ್ಜಿ ಅಹ್ವಾನ 2022

ಆಯ್ಕೆ ಪ್ರಕ್ರಿಯೆ: ದಾಖಲಾತಿ ಪರಿಶೀಲನೆ ವೈಯಕ್ತಿಕ ಸಂದರ್ಶನ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/01/2022

WEBSITE

NOTIFICATION

close button