ಪೂರ್ವ ರೈಲ್ವೆಯ ವಿವಿಧ ವಲಯಗಳಲ್ಲಿ ನೇಮಕಾತಿ 2022
Eastern Railway Recruitment 2022: ಇಂಡಿಯನ್ ರೈಲ್ವೆಯ ಪೂರ್ವ ರೈಲ್ವೆ ವಿಭಾಗದ ಅಧೀನದಲ್ಲಿ ಬರುವ ವಿವಿಧ ವಲಯಗಳಲ್ಲಿ ಅಗತ್ಯ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಪೂರ್ವ ರೈಲ್ವೆ ವಿಭಾಗ |
ಹುದ್ದೆಗಳ ಹೆಸರು: | ಅಪ್ರೆಂಟಿಸ್ ಹುದ್ದೆಗಳ ಭರ್ತಿ |
ಒಟ್ಟು ಹುದ್ದೆಗಳು | 1201 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಎಸ್‌ಎಸ್‌ಎಲ್‌ಸಿ ಜತೆಗೆ ಐಟಿಐ ನಲ್ಲಿ ವಿವಿಧ ಟ್ರೇಡ್‌ಗಳಾದ ಫಿಟ್ಟರ್ / ವೆಲ್ಡರ್ / ಮೆಕ್ಯಾನಿಕಲ್ / ಮಷಿನಿಸ್ಟ್ / ಕಾರ್ಪೆಂಟರ್ / ಪೇಂಟರ್ / ಲೈನ್‌ಮೆನ್ / ವೈಯರ್‌ಮೆನ್ / ರೆಫ್ರಿಜೆರೇಟರ್ ಮತ್ತು ಎಸಿ ಮೆಕ್ಯಾನಿಕ್ / ಇಲೆಕ್ಟ್ರೀಷಿಯನ್ / ಟೂಲ್ ಮಷಿನಿಸ್ಟ್ ಓದಿರುವವರು ಅರ್ಜಿ ಹಾಕಬಹುದು.
ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷಗಳು ಆಗಿರಬೇಕು. ಗರಿಷ್ಠ 24 ವರ್ಷ ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ವೇತನಶ್ರೇಣಿ:
ಕನಿಷ್ಠ ವೇತನ: ರೂ. 8,000/-
ಗರಿಷ್ಠ ಸಂಬಳ: ರೂ. 15,000/-
ಅರ್ಜಿ ಶುಲ್ಕ:
ಆಸಕ್ತ ಅಭ್ಯರ್ಥಿಗಳು ರೂ.100 ಅರ್ಜಿ ಶುಲ್ಕ ಪಾವತಿ ಮಾಡಬೇಕು. ಎಸ್‌ಸಿ / ಎಸ್‌ಟಿ / ಅಂಗವಿಕಲ/ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿ ಮಾಡಬಹುದು.
ಆಯ್ಕೆ ವಿಧಾನ
ಮೆರಿಟ್ ಪಟ್ಟಿ
ಡಾಕ್ಯುಮೆಂಟ್ ಪರಿಶೀಲನೆ
ಕೌಶಲ್ಯ ಅಥವಾ ಟ್ರೇಡ್ ಪರೀಕ್ಷೆ
ಅರ್ಜಿ ಸಲ್ಲಿಕೆಗೆ ಬೇಕಾದ ಅಗತ್ಯ ದಾಖಲೆಗಳು
ಆಧಾರ್ ಕಾರ್ಡ್
ವಿದ್ಯಾರ್ಹತೆಗಳ ಅಂಕಪಟ್ಟಿ
ಕಾರ್ಯಾನುಭವ ಪ್ರಮಾಣ ಪತ್ರ
ಜನ್ಮ ದಿನಾಂಕ ಪ್ರಮಾಣ ಪತ್ರ (ಇದ್ದಲ್ಲಿ)
ಭಾವಚಿತ್ರ ಸ್ಕ್ಯಾನ್ ಕಾಪಿ
ಸಹಿ ಸ್ಕ್ಯಾನ್ ಕಾಪಿ
ಇತರೆ
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 11-04-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 10-05-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |