ಭಾರತೀಯ ವಿದ್ಯುತ್ ನಿಗಮದಲ್ಲಿ 650 ಖಾಲಿ ಹುದ್ದೆಗಳ ಭರ್ತಿ

Telegram Group

 

ಭಾರತೀಯ ವಿದ್ಯುತ್ ನಿಗಮ (ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್) ನಲ್ಲಿ ಖಾಲಿ ಇರುವ ಒಟ್ಟು 650 ಟೆಕ್ನಿಕಲ್ ಆಫೀಸರ್ಸ್(ತಾಂತ್ರಿಕ ಅಧಿಕಾರಿ) ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿ ಪ್ರಕ್ರಿಯೆಯು ಫೆಬ್ರುವರಿ 06, 2021 ರಂದು ಪ್ರಾರಂಭಗೊಂಡು ಮತ್ತು ಫೆಬ್ರುವರಿ 15, 2021 ರಂದು ಮುಕ್ತಾಯಗೊಳ್ಳುತ್ತದೆ.

ಒಟ್ಟು ಹುದ್ದೆಗಳು: 650

ಉದ್ಯೋಗ ಸ್ಥಳ: ಭಾರತಾದ್ಯಂತ

ವಿದ್ಯಾರ್ಹತೆ:
ಹುದ್ದೆಗಳಿಗನುಗುಣವಾಗಿ ಇಂಜಿನಿಯರಿಂಗ್ ಪದವಿಯನ್ನು ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ / ಎಲೆಕ್ಟ್ರಿಕಲ್ ಎಲೆಕ್ಟ್ರಾನಿಕ್ಸ್ / ಎಲೆಕ್ಟ್ರಾನಿಕ್ಸ್ ಮತ್ತು ಉಪಕರಣ / ಮೆಕ್ಯಾನಿಕಲ್ / ಕಂಪ್ಯೂಟರ್ ಸೈನ್ಸ್ / ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಪೂರೈಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:
ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ- 30 ವಷಗಳ ವಯೋಮಿತಿಯನ್ನು ಮೀರಿರಬಾರದು.


ವೇತನಶ್ರೇಣಿ:
ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 23000/- ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಮೆರಿಟ್ ಪಟ್ಟಿ ಬಿಡುಗಡೆ ಮಾಡಿ ಆಯ್ಕೆ ಮಾಡಲಾಗುವುದು.

ಗುತ್ತಿಗೆ ಅವಧಿ : 6 ತಿಂಗಳು

ಪ್ರಮುಖ ದಿನಾಂಕಗಳು

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06-02-2021

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-02-2021

 

Website
Notification
Apply Online
Telegram Group
error: Content is protected !!