ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

10ನೇ ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಪಿಯೋನ್ ಹುದ್ದೆಗಳಿಗೆ ಅರ್ಜಿ ಅಹ್ವಾನ

ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಆನ್‌ಲೈನ್‌ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಮಾಡಲಾಗಿದೆ. ಇನ್ನೂ ಅರ್ಜಿ ಸಲ್ಲಿಸದೆ ಇದ್ದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ದಕ್ಷಿಣ ಕನ್ನಡ ಜಿಲ್ಲೆ ನ್ಯಾಯಾಲಯಗಳಲ್ಲಿ ಜವಾನರ ನೇಮಕ,ಅರ್ಜಿಗೆ ಜುಲೈ 03 ರವರೆಗೆ ಅವಕಾಶ ವಿಸ್ತರಣೆ. 34 ಜವಾನ ಹುದ್ದೆಗಳಿಗೆ ಆನ್‌ಲೈನ್‌ ಅರ್ಜಿ ಆಹ್ವಾನ.
ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಅಗತ್ಯ ಇದ್ದ ಜವಾನ ಹುದ್ದೆಗಳ ನೇಮಕಾತಿಗೆ ಕಳೆದ ತಿಂಗಳು ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತುತ ಸದರಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಆನ್‌ಲೈನ್‌ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ.

ಈ ಹಿಂದೆ ಮೇ 25 ರವರೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ ಇದೀಗ ಕೋವಿಡ್ ಹಿನ್ನೆಲೆ ಅವಧಿ ವಿಸ್ತರಿಸಿರುವ ನ್ಯಾಯಾಲಯವು ಜುಲೈ 03, 2021 ರವರೆಗೆ ಆನ್‌ಲೈನ್‌ ಅರ್ಜಿ ಸಲ್ಲಿಸಲು ಹಾಗೂ ಜುಲೈ 07, 2021 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಹುದ್ದೆಯ ಹೆಸರು ಜವಾನ
ಹುದ್ದೆಗಳ ಸಂಖ್ಯೆ 34
ವೇತನ ಶ್ರೇಣಿ: ರೂ.17,000-28,950 ರವರೆಗೆ.

ವಿದ್ಯಾರ್ಹತೆ:SSLC ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ತಿಳಿದಿರಬೇಕು.

ವಯೋಮಿತಿ
ಅರ್ಜಿ ಸಲ್ಲಿಸಲು ನಿಗದಿಪಡಿಸದ ಕೊನೆ ದಿನಾಂಕದಂದು ಕನಿಷ್ಠ 18 ವರ್ಷ ಆಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗೆ ಗರಿಷ್ಠ 35, ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಇತರೆ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.200.
SC / ST / ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಬಹುದು.

ಆಯ್ಕೆವಿಧಾನ
10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಒಂದು ಹುದ್ದೆಗೆ 10 ಅಭ್ಯರ್ಥಿಗಳನ್ನು (1:10 ರ ಅನುಪಾತದಲ್ಲಿ) ಮಾತ್ರ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಮೇಲೆ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:19-04-2021
ಅರ್ಜಿ ಸಲ್ಲಿಸಲು ಕೊನೆ ದಿನಾಂಕ:03-07-2021 ರ ರಾತ್ರಿ 11-59 ಗಂಟೆಯವರೆಗೆ.

Apply Link
Notification

close button