3293 ವಿವಿಧ ಹುದ್ದೆಗಳ ಬೃಹತ್ ನೇಮಕಾತಿ 2022

ಕಾರ್ಮಿಕ ರಾಜ್ಯ ವಿಮಾ ನಿಗಮದಿಂದ ಬೃಹತ್ ನೇಮಕಾತಿ 2022

ಕಾರ್ಮಿಕ ರಾಜ್ಯ ವಿಮಾ ನಿಗಮದಿಂದ ಅಗತ್ಯವಿರುವ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಒಟ್ಟು 3293, ಸ್ಟೆನೋಗ್ರಾಫರ್, ಅಪ್ಪರ್ ಡಿವಿಷನ್ ಕ್ಲರ್ಕ್, ಎಂಟಿಎಸ್,ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಭಾರತದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಚಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕ 15/02/2022 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಕಾರ್ಮಿಕ ರಾಜ್ಯ ವಿಮಾ ನಿಗಮ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗೆ ಕೊಟ್ಟಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ ಮತ್ತು ಸಾಧ್ಯವಾದಷ್ಟು ಈ ನೇಮಕಾತಿ ಮಾಹಿತಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

 

ಇಲಾಖೆ ಹೆಸರು:ಕಾರ್ಮಿಕ ರಾಜ್ಯ ವಿಮಾ ನಿಗಮ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು ಒಟ್ಟು 3293 ಹುದ್ದೆಗಳಿಗೆ ಅರ್ಜಿ ಅಹ್ವಾನ ( ಕರ್ನಾಟಕಕ್ಕೆ 282 ಹುದ್ದೆಗಳು ಮೀಸಲಿವೆ)
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ಶೈಕ್ಷಣಿಕ ವಿದ್ಯಾರ್ಹತೆ:
ಕಾರ್ಮಿಕ ರಾಜ್ಯ ವಿಮಾ ನಿಗಮ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಎಸೆಸೆಲ್ಸಿ/ಪಿಯುಸಿ/ಪದವಿ, ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನದ ಜೊತೆಗೆ ಎಮ್ ಎಸ್ ಆಫೀಸ್ ಬಗ್ಗೆ ತಿಳಿದಿರಬೇಕು,

ವಯೋಮಿತಿ:
ಕಾರ್ಮಿಕ ರಾಜ್ಯ ವಿಮಾ ನಿಗಮ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು
ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು
ಗರಿಷ್ಠ 27 ವರ್ಷಗಳ ವಯೋಮಿತಿಗಳನ್ನು ಮೀರಿರಬಾರದು.

 

 

ವೇತನ ಶ್ರೇಣಿ:
ಸ್ಟೆನೋಗ್ರಾಫರ್:ರೂ.25,500/- ರಿಂದ ರೂ.81,100/-
ಅಪ್ಪರ್ ಡಿವಿಷನ್ ಕ್ಲರ್ಕ್, ಎಂಟಿಎಸ್: ರೂ.18,000/- ರಿಂದ ರೂ.56,900/-

ಅರ್ಜಿ ಶುಲ್ಕ:
ಕಾರ್ಮಿಕ ರಾಜ್ಯ ವಿಮಾ ನಿಗಮ ನೇಮಕಾತಿ ಅಧಿಸೂಚನೆಯ ಪ್ರಕಾರ
ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ 500/-
ಮಹಿಳಾ / ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ 250/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ಕಾರ್ಮಿಕ ರಾಜ್ಯ ವಿಮಾ ನಿಗಮ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಎಲ್ಲ ಹುದ್ದೆಗಳ ಆಯ್ಕೆಗೆ ಆನ್‌ಲೈನ್‌ ಪರೀಕ್ಷೆ ನಡೆಸಲಿದ್ದು (ಪ್ರಿಲಿಮ್ಸ್‌ ಪರೀಕ್ಷೆ, ಮುಖ್ಯ ಪರೀಕ್ಷೆ, ಸ್ಕಿಲ್‌ ಟೆಸ್ಟ್‌)

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಜನವರಿ 15, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರುವರಿ 15, 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ Click Here 
ನೋಟಿಫಿಕೇಶನ್ Click Here 
ಅರ್ಜಿ ಲಿಂಕ್ Click Here 

error: Content is protected !!