ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಮುಂದೂಡಲಾಗಿದ್ದ FDA ಪರೀಕ್ಷಾ ದಿನಾಂಕ ನಿಗದಿ !

 

ಬೆಂಗಳೂರು : ಪ್ರಶ್ನೆ ಪತ್ರಿಕೆ ಬಹಿರಂಗಗೊಂಡ ಹಿನ್ನಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಸಹಾಯಕ, ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಯ ಸ್ಮರ್ಧಾತ್ಮಕ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಇಂತಹ ಪರೀಕ್ಷಾ ದಿನಾಂಕವನ್ನು ಕೆಪಿಎಸ್ಸಿ ಪ್ರಕಟಿಸಿದೆ. ದಿನಾಂಕ 28-02-2021ರಂದು ನಡೆಸುವುದಾಗಿ ಕೆಪಿಎಸ್ಸಿ ಪ್ರಕಟಿಸಿದೆ.

ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಜಿ.ಸತ್ಯವತಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು. ದಿನಾಂಕ 31-01-2020ರ ಅಧಿಸೂಚನೆಗಳಲ್ಲಿ ಅಧಿಸೂಚಿಸಲಾಗಿದ್ದ ಸಹಾಯಕ/ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 24-01-2021ರಂದು ನಡೆಯಬೇಕಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿರುತ್ತದೆ.


ಪ್ರಸ್ತುತ ಮುಂದೂಡಲಾದ ಎಫ್ ಡಿ ಎ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ದಿನಾಂಕ 28-02-2021ರಂದು ನಡೆಸಲು ಆಯೋಗವು ತೀರ್ಮಾನಿಸಿದೆ ಎಂದು ತಿಳಿಸಿದ್ದಾರೆ.

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

close button