10ನೇ ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಹುದ್ದೆಗಳು | District Court Recruitment 2022

ಗದಗ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆ 2022

Gadag District Court Recruitment 2022: ಗದಗ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು: ಗದಗ ಜಿಲ್ಲಾ ನ್ಯಾಯಾಲಯ
ಹುದ್ದೆಗಳ ಹೆಸರು: ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಆದೇಶ ಜಾರಿಕಾರರು ಹಾಗೂ ಜವಾನ
ಒಟ್ಟು ಹುದ್ದೆಗಳು  11
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

ಶೈಕ್ಷಣಿಕ ಅರ್ಹತೆ :
ಶೀಘ್ರಲಿಪಿಗಾರರು ಹುದ್ದೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತಾಂತ್ರಿಕ ಶಿಕ್ಷಣ ಪರೀಕ್ಷಾ ಮಂಡಳಿಯ ಕಮರ್ಷಿಯಲ್ ಪ್ರ್ಯಾಕ್ಟಿಸ್ 3 ವರ್ಷಗಳ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲಾದ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು & ಶೀಘ್ರಲಿಪಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಕಮರ್ಷಿಯಲ್ ಪ್ರ್ಯಾಕ್ಟಿಸ್ 3 ವರ್ಷಗಳ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

 

 

ಬೆರಳಚ್ಚುಗಾರರು ಹುದ್ದೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತಾಂತ್ರಿಕ ಶಿಕ್ಷಣ ಪರೀಕ್ಷಾ ಮಂಡಳಿಯ ಕಮರ್ಷಿಯಲ್ ಪ್ರ್ಯಾಕ್ಟಿಸ್ 3 ವರ್ಷಗಳ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲಾದ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಸೆಕ್ರೆಟರಿಯಲ್ ಪ್ರ್ಯಾಕ್ಟಿಸ್ 3 ವರ್ಷಗಳ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಆದೇಶ ಜಾರಿಕಾರರು ಹುದ್ದೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಡ್ರೈವಿಂಗ್ ಲೈಸೆನ್ಸ್ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಜವಾನ ಹುದ್ದೆಗೆ 10ನೇ ತರಗತಿಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕನ್ನಡ ಓದಲು, ಬರೆಯಲು ತಿಳಿದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ವೇತನಶ್ರೇಣಿ:
ಶೀಘ್ರಲಿಪಿಗಾರರು  ರೂ.27650/-   ರೂ -52650
ಬೆರಳಚ್ಚುಗಾರರು   ರೂ.21400-   ರೂ.42000
ಆದೇಶ ಜಾರಿಕಾರರು    ರೂ.19950-   ರೂ.37900
ಜವಾನ   ರೂ.17000-   ರೂ.28950

 

 

ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 100
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 100
ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಆಯ್ಕೆ ವಿಧಾನ
ಶೀಘ್ರಲಿಪಿಗಾರ ಹುದ್ದೆಗೆ ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ, ಹಿರಿಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು, ಶೀಘ್ರಲಿಪಿ ಪರೀಕ್ಷೆಯಲ್ಲಿ ಮತ್ತು ಆಯ್ಕೆ ಪ್ರಾಧಿಕಾರ ನಡೆಸುವ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ಪಡೆದ ಅಂಕ ಹಾಗೂ ಸಂದರ್ಶನದಲ್ಲಿ ಪಡೆದ ಅಂಕಗಳ ಸರಾಸರಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಬೆರಳಚ್ಚುಗಾರ ಹುದ್ದೆಗೆ ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ, ಹಿರಿಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ಮತ್ತು ಆಯ್ಕೆ ಪ್ರಾಧಿಕಾರ ನಡೆಸುವ ಬೆರಳಚ್ಚು ಪರೀಕ್ಷೆಗಳಲ್ಲಿ ಪಡೆದ ಅಂಕ ಹಾಗೂ ಸಂದರ್ಶನದಲ್ಲಿ ಪಡೆದ ಅಂಕಗಳ ಸರಾಸರಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಆದೇಶ ಜಾರಿಕಾರ, ಜವಾನ ಹುದ್ದೆಗೆ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಏಪ್ರಿಲ್ 01, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಏಪ್ರಿಲ್ 30, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ ಮೇ 05, 2022
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
error: Content is protected !!