ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಗದಗ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2021

 

WCD Gadag Recruitment 2021 – Apply Online for 120 Anganwadi Worker & Helper Posts

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗದಗ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08 ಫೆಬ್ರವರಿ 2021  ಆಗಿರುತ್ತದೆ.

ಉದ್ಯೋಗ ಸ್ಥಳ: ಗದಗ 

ಒಟ್ಟು ಹುದ್ದೆಗಳು:  120

ಅಂಗನವಾಡಿ ಕಾರ್ಯಕರ್ತೆ – 17

ಅಂಗನವಾಡಿ ಸಹಾಯಕಿ – 103

 

 

ವಿದ್ಯಾರ್ಹತೆ

ಅಂಗನವಾಡಿ ಸಹಾಯಕಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ.( 9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)

ಅಂಗನವಾಡಿ ಕಾರ್ಯಕರ್ತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.

ವಯೋಮಿತಿ: ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ವಿಧಾನ: ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿರುವ / ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3 ವ‍ರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

 

 

ಪ್ರಮುಖ ದಿನಾಂಕಗಳು 

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 08 ಫೆಬ್ರವರಿ  2021

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 08 ಫೆಬ್ರವರಿ  2021

 

ವೆಬ್ಸೈಟ್
ನೋಟಿಫಿಕೇಶನ್

 

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

close button