ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್

Telegram Group

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಉದ್ಯೋಗಿನಿ ಯೋಜನೆಯಡಿ ಆದಾಯೋತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ರಾಷ್ಟ್ರೀಕೃತ ಬ್ಯಾಂಕ್‍ಗಳ ಮೂಲಕ ಸಾಲ ಮತ್ತು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಿದೆ.

1 ಲಕ್ಷ ದಿಂದ 5 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ಮತ್ತು ನಿಗಮದಿಂದ ಶೇ. 70 ರಷ್ಟು ಅಥವಾ ಗರಿಷ್ಠ. 3.50 ಲಕ್ಷ ರೂ ಸಹಾಯಧನ ಒದಗಿಸಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲಾಗುವುದು.

18 ರಿಂದ 55 ವರ್ಷಗಳ ವಯೋಮಿತಿಯವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ 2 ಲಕ್ಷ ರೂ. ಮೀರಿರಬಾರದು. (ಆದಾಯ ಪ್ರಮಾಣ ಪತ್ರ ಲಗತ್ತಿಸುವುದು) ನೂತನವಾಗಿ ಸ್ಥಾಪಿಸುವ ಘಟಕಗಳಿಗೆ ಮಾತ್ರ ಆರ್ಥಿಕ ಸಹಾಯ ಒದಗಿಸಲಾಗುತ್ತದೆ.



ಅರ್ಜಿ ಸಲ್ಲಿಸುವ ಅರ್ಹ ಮಹಿಳೆಯರು ತಮ್ಮ ಸೇವಾ ವ್ಯಾಪ್ತಿಯ ಬ್ಯಾಂಕಿನ ವ್ಯವಸ್ಥಾಪಕರಿಂದ ಯಾವುದೇ ಸಾಲ ಬಾಕಿ ಇಲ್ಲ ಎಂಬುದನ್ನು ದೃಢೀಕರಿಸಿ ಅರ್ಜಿಯೊಂದಿಗೆ ಲಗತ್ತಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರವನ್ನು ಲಗತ್ತಿಸಬೇಕು.

ಅರ್ಜಿಯನ್ನು ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಜುಲೈ 31 ರೊಳಗೆ ತ್ರಿಪ್ರತಿಯಲ್ಲಿ ಸಲ್ಲಿಸಬೇಕು. ಅರ್ಜಿಗಳು ಉಚಿತವಾಗಿ ದೊರೆಯಲಿವೆ.

ಹೆಚ್ಚಿನ ವಿವರಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ, ಜಿಲ್ಲಾ ಆಡಳಿತ ಭವನ ಮೊದಲನೆ ಮಹಡಿ, ಕೊಠಡಿ ಸಂಖ್ಯೆ 129, ಚಾಮರಾಜನಗರ ಅಥವಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Telegram Group
error: Content is protected !!