ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ರೇಷನ್ ಕಾರ್ಡ್ ಇದ್ದವರಿಗೆ ಇಲ್ಲಿದೆ ಒಂದು ಗುಡ್ ನ್ಯೂಸ್!

ರೇಷನ್ ಕಾರ್ಡ್ ಇರುವ ಎಲ್ಲ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಬಜೆಟ್ ಕಾರ್ಯಕ್ರಮಗಳ ಜಾರಿಗೆ ಇಂಧನ ಸಚಿವ ಸುನಿಲ್ ಕುಮಾರ್ ಕಾಲಮಿತಿ ವಿಧಿಸಿದ್ದು, ಯೋಜನೆಗಳನ್ನು ಮುಗಿಸುವ ವಿಷಯದಲ್ಲಿ ರಾಜಿ ಇಲ್ಲವೆಂದು ಹೇಳಿದ್ದಾರೆ.

ಕಾವೇರಿ ಭವನದಲ್ಲಿ ಕೆಪಿಟಿಸಿಎಲ್ ಕಚೇರಿಯ ಸಮ್ಮೇಳನ ಸಭಾಂಗಣದಲ್ಲಿ ಇಂಧನ ಇಲಾಖೆ, ವಿದ್ಯುತ್ ಸರಬರಾಜು ಕಂಪನಿಗಳ ಅಧಿಕಾರಿಗಳೊಂದಿಗೆ ಕಾರ್ಯನಿರ್ವಹಣೆ ಕುರಿತಂತೆ ಅವರು ಸಭೆ ನಡೆಸಿದರು.

ಕಾಲಮಿತಿಯೊಳಗೆ ಬಜೆಟ್ನಲ್ಲಿ ಘೋಷಿಸಿದ ಕಾರ್ಯಕ್ರಮ ಮತ್ತು ಕೇಂದ್ರ ಸರ್ಕಾರದ ಸಹಯೋಗದ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

 

 

ಟ್ರಾನ್ಸ್ ಫಾರ್ಮರ್ ಬದಲಾವಣೆ, ದುರಸ್ತಿಗೆ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಗಂಗಾ ಕಲ್ಯಾಣ ಯೋಜನೆಯಡಿ ವಿದ್ಯುತ್ ಸಂಪರ್ಕವನ್ನು ಕಾಲಮಿತಿಯೊಳಗೆ ನೀಡಬೇಕು. ಅನಧಿಕೃತ ವಿದ್ಯುತ್ ಸಂಪರ್ಕ, ಸೋರಿಕೆ ತಡೆಯಬೇಕು. ವಿದ್ಯುತ್ ಸಂಪರ್ಕ ಮತ್ತು ಮೀಟರ್ ಅಳವಡಿಕೆಯಲ್ಲಿ ವಿಳಂಬ ನೀತಿ ಅನುಸರಿಸಬಾರದು ಎಂದು ತಿಳಿಸಿದ್ದಾರೆ.

ಕೃಷಿ, ಕೈಗಾರಿಕೆ ಸೇರಿದಂತೆ ಎಲ್ಲ ವರ್ಗದ ಗ್ರಾಹಕರಿಗೆ ಗುಣಮಟ್ಟದ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸಚಿವ ಸುನಿಲ್ ಕುಮಾರ್ ಸೂಚಿಸಿದ್ದಾರೆ.

 

 

 

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

close button