ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!

ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರದಂತೆ ತನ್ನ ನೌಕರರಿಗೆ ಶೇಕಡ.11 ತುಟ್ಟಿಭತ್ಯೆ ಹೆಚ್ಚಳ ಮಾಡಿ, ಆದೇಶ ನೀಡಿದೆ. ಕೋವಿಡ್‌ ಸಾಂಕ್ರಾಮಿಕದ ಹಿನ್ನೆಲೆ ತಡೆ ಹಿಡಿಯಲ್ಪಟ್ಟಿದ್ದ ತುಟ್ಟಿಭತ್ಯೆ ಬಿಡುಗಡೆ ಮಾಡುವ ಮೂಲಕ ಸಿಎಂ ಬಿ.ಎಸ್. ಯಡಿಯೂರಪ್ಪ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದಾರೆ.

2020 ರ ಜನವರಿ ತಿಂಗಳಿಂದಲೂ ಕೊರೊನಾ ಕಾರಣದಿಂದ ತುಟ್ಟಿಭತ್ಯೆ ತಡೆ ಹಿಡಿದ ಪರಿಣಾಮ ಸರ್ಕಾರಿ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ಕಳೆದ ಮೂರು ಕಂತುಗಳ ತುಟ್ಟಿಭತ್ಯೆ ಲಭ್ಯವಾಗಿರಲಿಲ್ಲ. ಅಖಿಲ ಭಾರತ ಸೂಚ್ಯಂಕ ಆಧರಿಸಿ ಕೇಂದ್ರ ಸರ್ಕಾರ ಕಳೆದ ವಾರ ತನ್ನ ನೌಕರರ ಶೇಕಡ.11 ರಷ್ಟು ಡಿಎ ಉಡುಗೊರೆ ನೀಡಿತ್ತು. ಇದೇ ಮಾದರಿಯಲ್ಲಿ ರಾಜ್ಯದಲ್ಲೂ ಡಿಎ ಮಂಜೂರು ಮಾಡಬೇಕೆಂಬ ಬೇಡಿಕೆ ಇತ್ತು.

ನಿನ್ನೆಯಷ್ಟೇ ಕೇಂದ್ರ ಸರ್ಕಾರದ ತುಟ್ಟಿಭತ್ಯೆ ಸಂಬಂಧದ ಆದೇಶ ಬಿಡುಗೊಡೆಗೊಂಡಿತ್ತು. ಬಳಿಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು. ತಕ್ಷಣವೇ ಬಾಕಿ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸಿಎಂ ಆದೇಶ ನೀಡಿದ್ದಾರೆ. ಆರ್ಥಿಕ ಇಲಾಖೆ ಮೂಲಕ 2-3 ದಿನಗಳಲ್ಲಿ ಸರ್ಕಾರಿ ಆದೇಶವಾಗಿ ಹೊರಬೀಳಲಿದೆ. ಜು 01, 2021 ರಿಂದ ಮಂಜೂರಾಗುವ ತುಟ್ಟಿಭತ್ಯೆ ಮೂಲ ವೇತನದಲ್ಲಿ ಸೇರ್ಪಡೆಗೊಳ್ಳಲಿದೆ.

ಡಿಎ ಗಿಫ್ಟ್‌ ಯಾರಿಗೆಲ್ಲ ಸಿಗಲಿದೆ?
6 ಲಕ್ಷ ಸರ್ಕಾರಿ ನೌಕರರು, 3 ಲಕ್ಷ ನಿಗಮ ಮಂಡಳಿ ನೌಕರರು, 4.50 ಲಕ್ಷ ಪಿಂಚಣಿದಾರರಿಗೆ ಡಿಎ ಗಿಫ್ಟ್‌ ಸಿಗಲಿದೆ.

ಸರ್ಕಾರಿ ನೌಕರರು, ನಿಗಮ ಮಂಡಳಿ ನೌಕರರು, ಪಿಂಚಣಿದಾರರಿಗೆ ಡಿಎ ಹೆಚ್ಚಳ ಮಾಡಿರುವುದರಿಂದ ರಾಜ್ಯ ಸರ್ಕಾರಕ್ಕೆ 250 ಕೋಟಿ ರೂ ಹೊರೆ ಬೀಳಲಿದೆ.

error: Content is protected !!