ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ನೀವು ಸರ್ಕಾರಿ ನೌಕರರೇ? ಇಲ್ಲಿದೆ ಒಂದು ಪ್ರಮುಖ ಮಾಹಿತಿ

 

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಆಸ್ತಿ ಹೊಣೆಗಾರಿಕೆ ವಿವರಗಳನ್ನು ಡಿಸೆಂಬರ್ 31 ರೊಳಗೆ ಸಲ್ಲಿಸಬೇಕಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಈ ಕುರಿತು ಆದೇಶ ಹೊರಡಿಸಿದ್ದು, ಆರ್ಥಿಕ ವರ್ಷದ ಬದಲಿಗೆ ಕ್ಯಾಲೆಂಡರ್ ವರ್ಷದ ಕೊನೆಯಲ್ಲಿ ಆಸ್ತಿ ಹೊಣೆಗಾರಿಕೆ ವಿವರಗಳನ್ನು ಸಲ್ಲಿಸುವಂತೆ ಆದೇಶ ಹೊರಡಿಸಲಾಗಿದೆ.

 

 

ಸರ್ಕಾರಿ ನೌಕರರು ಯಾವುದೇ ಸೇವೆ ಅಥವಾ ಹುದ್ದೆಗೆ ನೇಮಕವಾದ 3 ತಿಂಗಳೊಳಗೆ ತಮ್ಮ ಹೆಸರಿನಲ್ಲಿರುವ ಮತ್ತು ಕುಟುಂಬ ಸದಸ್ಯರಿಂದ ಬಂದ ಸ್ಥಿರಾಸ್ತಿ ಕುರಿತಾಗಿ ಪೂರ್ಣ ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು. ಪ್ರತಿ ಆರ್ಥಿಕ ವರ್ಷಕ್ಕೆ ಅನುಗುಣವಾಗಿ ಮಾರ್ಚ್ 31 ರೊಳಗೆ ಆಸ್ತಿಗಳ ಹೊಣೆಗಾರಿಕೆ ಪಟ್ಟಿ ಸಲ್ಲಿಸಬೇಕಿತ್ತು. ಆದರೆ, ಆರ್ಥಿಕ ವರ್ಷದ ಬದಲಿಗೆ ಕ್ಯಾಲೆಂಡರ್ ವರ್ಷದ ಕೊನೆಯಲ್ಲಿ ಅಂದರೆ ಡಿಸೆಂಬರ್ 31 ರೊಳಗೆ ಮಾಹಿತಿ ನೀಡಲು ತಿಳಿಸಲಾಗಿದೆ.

close button