ಕೊಪ್ಪಳ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿಯಿರುವ ಗ್ರಾಮ ಕಾಯಕ ಮಿತ್ರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ ಹೆಸರು: ಗ್ರಾಮ ಕಾಯಕ ಮಿತ್ರ (ಮಹಿಳೆ)
ಹುದ್ದೆಗಳ ಸಂಖ್ಯೆ: 15
ವಿದ್ಯಾರ್ಹತೆ : ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು ಜೊತೆಗೆ ಓದು,ಬರಹ ಚೆನ್ನಾಗಿ ತಿಳಿದಿರಬೇಕು.
ವಯೋಮಿತಿ: ಅಭ್ಯರ್ಥಿಗಳಿಗೆ 45 ವರ್ಷ ಮೀರಿರಬಾರದು.
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 6000 ಗೌರವಧನ ಹಾಗೂ ಕಾರ್ಯನಿರ್ವಹಣೆ ಆಧರಿಸಿ ರೂ. 5000 ಪ್ರೋತ್ಸಾಹಧನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಹೊರಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು.
ಅರ್ಜಿ ಸಲ್ಲಿಸುವ ವಿಳಾಸ : ಅರ್ಜಿಯನ್ನು ನೇರವಾಗಿ ಅಭ್ಯರ್ಥಿಗಳು ಹುದ್ದೆ ಖಾಲಿಯಿರುವ ಗ್ರಾಮ ಪಂಚಾಯಿತಿಗೆ ಸಲ್ಲಿಸುವುದು.
ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಿಶೇಷ ಸೂಚನೆ: ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಆಯಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕ್ರಿಯಾಶೀಲ ಜಾಬ್ ಕಾರ್ಡ್ ಹೊಂದಿರಬೇಕು. ಈ ಹುದ್ದೆಗಳಿಗೆ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.
ಉದ್ಯೋಗ ಸ್ಥಳ: ಕೊಪ್ಪಳ ತಾಲ್ಲೂಕಿನ ಬೆಟಗೇರಿ, ಬಿಸರಹಳ್ಳಿ, ಕಲಕೇರಿ, ಕೋಳೂರು, ಕುಷ್ಟಗಿ ತಾಲ್ಲೂಕಿನ ತುಗ್ಗಲದೋಣಿ, ಕನಕಗಿರಿ ತಾಲ್ಲೂಕಿನ ನವಲಿ, ಯಲಬುರ್ಗಾ ತಾಲ್ಲೂಕಿನ ಮುರಡಿ, ಮಾಟಲದಿನ್ನಿ, ವಣಗೇರಿ, ಹಿರೇಅರಳಿಹಳ್ಳಿ, ಚಿಕ್ಕಮ್ಯಾಗೇರಿ, ಕುಕನೂರು ತಾಲ್ಲೂಕಿನ ಮಂಗಳೂರು, ಶಿರೂರು ಹಾಗೂ ಗಂಗಾವತಿ ತಾಲ್ಲೂಕಿನ ಆನೆಗುಂದಿ ಮತ್ತು ಮಲ್ಲಾಪುರ ಗ್ರಾಮ ಪಂಚಾಯಿತಿಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 25, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 06, 2021
Notification – ಅಧಿಸೂಚನೆ |