WhatsApp Telegram Group

ಪಿಯುಸಿ ಪಾಸಾದವರಿಗೆ ಹೊಸ ಸರ್ಕಾರಿ ನೇಮಕಾತಿ 2022 |

ಹಾಸನ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆ 2022

Hassan District Court Recruitment 2022 : ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು: ಹಾಸನ ಜಿಲ್ಲಾ ನ್ಯಾಯಾಲಯ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  22
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

In Article ad
ಹುದ್ದೆಗಳ ಹೆಸರು  ವೇತನಶ್ರೇಣಿ  ಹುದ್ದೆಗಳ ಸಂಖ್ಯೆ 
ಶೀಘ್ರಲಿಪಿಗಾರರು 27,650-52,650 10
ಬೆರಳಚ್ಚುಗಾರರು 21,400-42,000 09
ಬೆರಳಚ್ಚು ನಕಲುಗಾರ 21,400-42,000 03

 

ವಿದ್ಯಾರ್ಹತೆ:

ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ಪಿಯುಸಿ ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

In Article ad

ಶೀಘ್ರಲಿಪಿಗಾರರು ಹುದ್ದೆಗೆ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಹಾಗೂ ಶೀಘ್ರಲಿಪಿ ಪ್ರೌಢ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು

ಬೆರಳಚ್ಚುಗಾರರು ಹುದ್ದೆಗೆ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಬೆರಳಚ್ಚು ನಕಲುಗಾರ ಹುದ್ದೆಗೆ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಕಿರಿಯ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

 

In Article ad

 

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ, ಮಾಜಿ ಸೈನಿಕ ಅಭ್ಯರ್ಥಿಗಳು ರೂ. 200
ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ

In Article ad

ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಆಯ್ಕೆ ವಿಧಾನ:
ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

 

In Article ad

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಏಪ್ರಿಲ್ 23, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಮೇ 23, 2022
ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ ಮೇ 25, 2022
ಪ್ರಮುಖ ಲಿಂಕುಗಳು 
ಶೀಘ್ರಲಿಪಿಗಾರರು (ನೋಟಿಫಿಕೇಶನ್) ಇಲ್ಲಿ ಕ್ಲಿಕ್ ಮಾಡಿ 
ಬೆರಳಚ್ಚುಗಾರರು (ನೋಟಿಫಿಕೇಶನ್) ಇಲ್ಲಿ ಕ್ಲಿಕ್ ಮಾಡಿ 
ಬೆರಳಚ್ಚು ನಕಲುಗಾರ (ನೋಟಿಫಿಕೇಶನ್) ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗ ಮಾಹಿತಿ

close button