ಉಚ್ಚ ನ್ಯಾಯಾಲಯದಲ್ಲಿಸಿವಿಲ್ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

ಉದ್ಯೋಗ ಮಾಹಿತಿ 

ಕರ್ನಾಟಕ ರಾಜ್ಯ ​ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ಒಟ್ಟು 94 ಸಿವಿಲ್ ನ್ಯಾಯಾಧೀಶ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನಿಗದಿಪಡಿಸಿದ ಕೊನೆಯ ದಿನಾಂಕ ಏಪ್ರಿಲ್ 27,2021ರೊಳಗಾಗಿ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳು: 94

ಉದ್ಯೋಗ ಸ್ಥಳ: ಕರ್ನಾಟಕ

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಹಾಗೂ ಕಡ್ಡಾಯವಾಗಿ ವಕೀಲರಾಗಿ ನೋಂದಣಿ ಆಗಿರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಟ 35 ವರ್ಷ ವಯೋಮಿತಿಯೊಳಗಿನವರಾಗಿರಬೇಕು. ಇನ್ನು ಮೀಸಲಾತಿಗಳಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದ್ದು ಈ ಕುರಿತ ಮಾಹಿತಿಗೆ ಅಧಿಸೂಚನೆಯನ್ನು ಗಮನಿಸಿ

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳು ರೂಪಾಯಿ 500/- ಅರ್ಜಿ ಶುಲ್ಕ ಪಾವತಿಸಬೇಕು, ಮತ್ತು ಪ.ಜಾ/ಪ.ಪಂ/ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 27,700/- ರಿಂದ 44,770/-ರೂ ವೇತನ ಪಡೆಯಬಹುದು.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಮೌಖಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 27 ಮಾರ್ಚ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27 ಎಪ್ರಿಲ್ 2021
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 27 ಎಪ್ರಿಲ್ 2021

Website
Notification
Apply Online

error: Content is protected !!