ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ (ಇಂಜಿನಿಯರಿಂಗ್) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಮೂಲಕ ಕೇಳಿರುವ ಮಾಹಿತಿಯನ್ನು ಭರ್ತಿ ಮಾಡಿ ದಿನಾಂಕ : 22-11-2021 ರಿಂದ 06-12-2021 ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ , ಎಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಷನ್, ಇನ್ಸ್ಟ್ರುಮೆಂಟೇಷನ್, ಕಂಪ್ಯೂಟರ್ ಸೈನ್ಸ್ (IT) ನಲ್ಲಿ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಶೇ.60ರಷ್ಟು ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು.
ವಯೋಮಿತಿ:
ದಿನಾಂಕ : 22-11-2021 ರ ಅನ್ವಯ ಕನಿಷ್ಟ 18 ವರ್ಷಗಳು ಗರಿಷ್ಟ 25 ವರ್ಷಗಳ ವಯಯೋಮಿತಿಯೊಳಗೆ ಇರಬೇಕು. ನೇಮಕಾತಿ ನಿಯಮಾನುಸಾರ OBC ಅಭ್ಯರ್ಥಿಗಳಿಗೆ 3 ವರ್ಷಗಳು, SC/ST ಅಭ್ಯರ್ಥಿಗಳಿಗೆ 5 ವರ್ಷಗಳು ಮತ್ತು PH ಅಭ್ಯರ್ಥಿಗಳಿಗೆ 10 ವರ್ಷಗಳ ವರೆಗೆ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ವೇತನ ಶ್ರೇಣಿ:
ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ (ಇಂಜಿನಿಯರಿಂಗ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಪ್ರತಿ ತಿಂಗಳಿಗೆ ರೂ.25,000/- ಸ್ಟೈಫೆಂಡ್ ಪಡೆಯುವರು.
ಆಯ್ಕೆ ವಿಧಾನ:
ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ (ಇಂಜಿನಿಯರಿಂಗ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಮತ್ತು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22 ನವೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 6 ಡಿಸೆಂಬರ್ 2021
Website |
Notification PDF |