462 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ । IARI Recruitment 2022

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ 462 ಹುದ್ದೆಗಳನ್ನು ಭರ್ತಿ

IARI Recruitment 2022: ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್ (ICAR) ನಿಂದ ಹಣಕಾಸು ಮತ್ತು ಆಡಳಿತವನ್ನು ಹೊಂದಿರುವ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (IARI)ಯಲ್ಲಿ ಖಾಲಿ ಇರುವ 462 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  462
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ವಿವರ 
ಪ್ರದಾನ ಕಚೇರಿಯಲ್ಲಿ – 71
ಸಂಶೋಧನಾ ಸಂಸ್ಥೆಯಲ್ಲಿ – 391

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಮತ್ತು ಗರಿಷ್ಟ 30 ವರ್ಷ ವಯೋಮಿತಿ ಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. * ICAR ಅಭ್ಯರ್ಥಿಗಳಿಗೆ 45 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 7ನೇ ವೇತನ ಆಯೋಗದ ಅನ್ವಯ 6ನೇ ಹಂತದ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ. 1200/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಪರಿಶಿಷ್ಟ ಜಾತಿ / ಪರಿಶಿಷ್ಟ ಪರಿಶಿಷ್ಟ ಪಂಗಡ , ಅಂಗವಿಕಲ ಹಾಗೂ ಮಹಿಳಾ ಅಭ್ಯರ್ಥಿಗಳು ರೂ. 500/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ 
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಪೂರ್ವಭಾವಿ ಪರೀಕ್ಷೆಯನ್ನು ನಡೆಸಲಾಗುವುದು. ಈ ಎರಡು ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಮುಖ್ಯ ಪರೀಕ್ಷೆಗೆ ಆಹ್ವಾನಿಸಲಾಗಿವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  9 ಮೇ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  1 ಜೂನ್ 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
error: Content is protected !!