ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಬೃಹತ್ ನೇಮಕಾತಿಗೆ ಅಧಿಸೂಚನೆ ಪ್ರಕಟ | IBPS CRP Clerk XI Recruitment 2021 – Apply Online for 7855 Vacancy


ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್(IBPS) ದಿಂದ ಒಟ್ಟು 7855 CRP XI ಕ್ಲರ್ಕ್‌ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಕರ್ನಾಟಕದ ಅಭ್ಯರ್ಥಿಗಳಿಗೆ ಕನ್ನಡದಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.

ಒಟ್ಟು ಹುದ್ದೆಗಳು: 7855
ಉದ್ಯೋಗ ಸ್ಥಳ: ಭಾರತದಾದ್ಯಂತ

ವಿದ್ಯಾರ್ಹತೆ:
ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಪಡೆದಿರಬೇಕು. ಅಥವಾ ಯಾವುದೇ ಪದವಿಗೆ ಸಮಾನ ಅರ್ಹತೆಯ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

 

ವಯೋಮಿತಿ:
ಕನಿಷ್ಠ ವಯಸ್ಸು: 20 ವರ್ಷಗಳು
ಗರಿಷ್ಠ ವಯಸ್ಸು: 28 ವರ್ಷಗಳು
ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯವಾಗುತ್ತದೆ.

ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷಗಳು
ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಸಡಿಲಿಕೆ ಕಲ್ಪಿಸಲಾಗಿದೆ

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ: ರೂ. 850/-
SC/ST/PWD/EXSM ಅಭ್ಯರ್ಥಿಗಳಿಗೆ: ರೂ. 175/-

ಆಯ್ಕೆ ವಿಧಾನ:
IBPS CRP ಕ್ಲರ್ಕ್-XI ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ಲೈನ್ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 7 ಅಕ್ಟೋಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27 ಅಕ್ಟೋಬರ್ 2021
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 27 ಅಕ್ಟೋಬರ್ 2021

Website 
Notification 
Apply Online 

IBPS CRP Clerk XI Recruitment 2021 – Apply Online for 7855 Vacancies 

error: Content is protected !!