ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಗ್ರಾಮೀಣ ಬ್ಯಾಂಕ್‌ಗಳ ಕ್ಲೆರಿಕಲ್ ಕೇಡರ್ ಪರೀಕ್ಷಾ ಪ್ರವೇಶ ಪತ್ರ ಪ್ರಕಟ 2021

ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ಕ್ಲೆರಿಕಲ್ ಕೇಡರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪೂರ್ವಭಾವಿ ಪರೀಕ್ಷೆಗೆ ಅಡ್ಮಿಟ್‌ ಕಾರ್ಡ್‌ ಅನ್ನು ಬಿಡುಗಡೆ ಮಾಡಿದೆ. ಸದರಿ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಐಬಿಪಿಎಸ್‌ನ ಅಫೀಶಿಯಲ್ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಐಬಿಪಿಎಸ್‌ ಆರ್‌ಆರ್‌ಬಿ ಕ್ಲರ್ಕ್‌ ಪ್ರಿಲಿಮ್ಸ್‌ ಪರೀಕ್ಷೆಗೆ ಆಗಸ್ಟ್‌ 14, 2021 ರವರೆಗೆ ಅಡ್ಮಿಟ್‌ ಕಾರ್ಡ್‌ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ಇರುತ್ತದೆ. 5000 ಕ್ಲರ್ಕ್‌ ಹುದ್ದೆಗಳಿಗೆ ಅಭ್ಯರ್ಥಿಗಳು ಆಯ್ಕೆ ಆಗುವ ಅವಕಾಶ ಇದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಹೆಚ್ಚು ಎಂದು ನೋಟಿಫಿಕೇಶನ್‌ನಲ್ಲಿ ತಿಳಿಸಲಾಗಿದೆ.

Download Call Letter

close button