ಭಾರತೀಯ ಅಂಚೆ ಇಲಾಖೆಯು ಬೃಹತ್ ನೇಮಕಾತಿ ಪ್ರಕಟಣೆ ಬಿಡುಗಡೆ ಮಾಡಿದೆ
India Post Recruitment 2022: ಭಾರತೀಯ ಅಂಚೆ ಇಲಾಖೆಯು ಬೃಹತ್ ನೇಮಕಾತಿ ಪ್ರಕಟಣೆ ಬಿಡುಗಡೆ ಮಾಡಿದೆ. ದೇಶದಾದ್ಯಂತ 38,926 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕದಲ್ಲಿ 2410 ಹುದ್ದೆಗಳನ್ನು ಈ ನೇಮಕಾತಿ ಪ್ರಕ್ರಿಯೆ ಮೂಲಕ ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಮೇ 02 ರಿಂದ ಅರ್ಜಿ ಸ್ವೀಕಾರ ಆರಂಭವಾಗಿದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ಭಾರತೀಯ ಅಂಚೆ ಇಲಾಖೆ |
ಹುದ್ದೆಗಳ ಹೆಸರು: | ಬ್ರಾಂಚ್ ಪೋಸ್ಟ್ ಮಾಸ್ಟರ್ ಮತ್ತು ಗ್ರಾಮೀಣ ಡಾಕ್ ಸೇವಕರು |
ಒಟ್ಟು ಹುದ್ದೆಗಳು | 38926 (ಕರ್ನಾಟಕಕ್ಕೆ 2410 ಹುದ್ದೆಗಳು) |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಅರ್ಜಿ ಸಲ್ಲಿಸಲು ಕನಿಷ್ಠ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಪಡೆದಿರಬೇಕು.
ಕರ್ನಾಟಕ ಅಧಿಕೃತ ಭಾಷೆ ಕನ್ನಡವನ್ನು ಓದಲು, ಬರೆಯಲು, ಮಾತನಾಡಲು ತಿಳಿದಿರಬೇಕು.
ಬೇಸಿಕ್ ಕಂಪ್ಯೂಟರ್ ಜ್ಞಾನ ಮತ್ತು ಪ್ರಮಾಣ ಪತ್ರಗಳನ್ನು ಹೊಂದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆ ದಿನಾಂಕಕ್ಕೆ ಸರಿಯಾಗಿ ಅಭ್ಯರ್ಥಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 40 ವರ್ಷ ಮೀರಿರಬಾರದು.
ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನಿಯಮ ಅನ್ವಯವಾಗುತ್ತದೆ.
ವೇತನಶ್ರೇಣಿ:
ಭಾರತೀಯ ಅಂಚೆ ಇಲಾಖೆಯ ನೇಮಕಾತಿಯ ಅಧಿಸೂಚನೆಯ ಪ್ರಕಾರ
ಬ್ರ್ಯಾಂಚ್ ಪೋಸ್ಟ್‌ಮಾಸ್ಟರ್: ರೂ12,000 ದಿಂದ 14,000 ವರೆಗೆ.
ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್: ರೂ10,000 ದಿಂದ 12,000 ವರೆಗೆ.
ಡಾಕ್ ಸೇವಕ್ : ರೂ10,000 ದಿಂದ 12,000 ವರೆಗೆ.
ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳು ರೂ.100 ಪಾವತಿಸಬೇಕು.
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ / ಮಹಿಳಾ ಅಭ್ಯರ್ಥಿಗಳಿಗೆ ಅಪ್ಲಿಕೇಶನ್ ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ವಿಧಾನ
ಆನ್‌ಲೈನ್‌ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ನಿಯಮಾನುಸಾರ ಸ್ವಯಂಚಾಲಿತ ಮೆರಿಟ್ ಪಟ್ಟಿ ತಯಾರು ಮಾಡುವ ಮೂಲಕ ನೇಮಕಾತಿ ಆಯ್ಕೆ ಪಟ್ಟಿ ಸಿದ್ಧಪಡಿಸಿ ನೇಮಕ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 02-05-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 05-06-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |