ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕೇಂದ್ರದಲ್ಲಿ ಬೃಹತ್ ನೇಮಕಾತಿ 2021

ಭಾರತೀಯ ಸೇನೆಯ ಭಾಗವಾಗಿರುವ ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಒಟ್ಟು 1159 ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ ಮಾರ್ಚ್ 7, 2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಒಟ್ಟು ಹುದ್ದೆಗಳು: 1159

ಉದ್ಯೋಗ ಸ್ಥಳ: ಭಾರತಾದ್ಯಂತ

ಬೇಕಾಗಿರುವ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10ನೇ ತರಗತಿ/ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ / ಬೋರ್ಡ್ ಹೊಂದಿರಬೇಕು.

ಅರ್ಜಿ ಶುಲ್ಕ:
ಎಲ್ಲ ಅಭ್ಯರ್ಥಿಗಳು ರೂಪಾಯಿ 205/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಪ.ಜಾ/ಪ.ಪಂ/ಅಂಗವಿಕಲ/ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿ ನೀಡಲಾಗಿದೆ.


ವಯೋಮಿತಿ:
ಅಭ್ಯರ್ಥಿಗಳು ಕನಿಷ್ಟ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಟ 25 ವರ್ಷ ವಯೋಮಿತಿಯನ್ನು ಮೀರಿರಬಾರದು.

ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ತಿಂಗಳ ಸಂಬಳ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 18,000/- ರಿಂದ 56,900/-ರೂಗಳ ವರೆಗೆ ವೇತನ ನಿಗದಿಪಡಿಸಲಾಗಿದೆ.

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22 ಫೆಬ್ರುವರಿ 2021
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 7 ಮಾರ್ಚ್ 2021

Website 
Notification 
close button