SSLC PUC ITI ಪಾಸ್ ಆದವರಿಗೆ ತೈಲ ನಿಗಮದಲ್ಲಿ ಉದ್ಯೋಗಾವಕಾಶ : ಈಗಲೇ ಅರ್ಜಿ ಸಲ್ಲಿಸಿ


ಭಾರತೀಯ ತೈಲ ನಿಗಮ ನಿಯಮಿತದಲ್ಲಿ (IOCL) 300 ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳ ವಿವರ:
ತಾಂತ್ರಿಕೇತರ ಅಪ್ರೆಂಟಿಸ್ – 245 ಹುದ್ದೆಗಳು
ತಾಂತ್ರಿಕ ಅಪ್ರೆಂಟಿಸ್ – 55 ಹುದ್ದೆಗಳು
ಒಟ್ಟು 300 ಹುದ್ದೆಗಳು

ವಿದ್ಯಾರ್ಹತೆ:
10ನೇ ತರಗತಿ/ಮೆಟ್ರಿಕ್ಯುಲೇಶನ್ ಅಥವಾ ಐಟಿಐ ವಿದ್ಯಾರ್ಹತೆ ; 12ನೇ ತರಗತಿ; ಡಿಪ್ಲೋಮಾ ಮತ್ತು ಪದಿವ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:
ನವೆಂಬರ್ 30,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಯ ಗರಿಷ್ಟ 27 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಗರಿಷ್ಟ 29 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

 

 

ವೇತನ ಶ್ರೇಣಿ
ಆಯ್ಕೆಯಾದ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ನೇಮಕಾತಿ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಸುವುದು ಹೇಗೆ:
ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://iocl.com/apprenticeships ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 10,2021 ರಿಂದ ಡಿಸೆಂಬರ್ 27,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 

 

ಆನ್‌ಲೈನ್ ಮೂಲಕ ಡಿಸೆಂಬರ್ 10,2021 ರಿಂದ ಡಿಸೆಂಬರ್ 27,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Website
Notification PDF

 

IOCL Recruitment 2022 – Apply Online for 300 Trade & Technician Apprentice Posts @ iocl.com

error: Content is protected !!