ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕಿರಿಯ ಸಹಾಯಕರು ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ ನೇಮಕಾತಿ ಅಧಿಸೂಚನೆ 2022

ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರ ಇಲ್ಲಿ ಖಾಲಿ ಇರುವ 09 ಕಿರಿಯ ಸಹಾಯಕರು / ಬೆರಳಚ್ಚುಗಾರರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

 

ಇಲಾಖೆ ಹೆಸರು:ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ
ಹುದ್ದೆಗಳ ಹೆಸರು:ಕಿರಿಯ ಸಹಾಯಕರು / ಬೆರಳಚ್ಚುಗಾರರು
ಒಟ್ಟು ಹುದ್ದೆಗಳು 09
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 

 

ವಿದ್ಯಾರ್ಹತೆ:
ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನ ವನ್ನು ಕಡ್ಡಾಯವಾಗಿ ಹೊಂದಿರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
– ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳು,
– ಪ್ರವರ್ಗ – 2(ಎ), 2(ಬಿ), 3(ಬಿ) ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷಗಳು,
– ಎಸ್ಸಿ / ಎಸ್ಟಿ , ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

 

 

ವೇತನಶ್ರೇಣಿ:
ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ  ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 30,350 – 58,250 ರವರೆಗೆ ವೇತನ ಪಡೆಯಲಿದ್ದಾರೆ.

ಅರ್ಜಿ ಶುಲ್ಕ:
ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ  ಸಾಮಾನ್ಯ ವರ್ಗ ಸೇರಿದ ಅಭ್ಯರ್ಥಿಗಳಿಗೆ ₹1000/-
* ಎಸ್ಸಿ / ಎಸ್ಟಿ ಗೆ ಸೇರಿದ ಅಭ್ಯರ್ಥಿಗಳಿಗೆ ₹500/- ಅರ್ಜಿ ಶುಲ್ಕ ಇರುತ್ತದೆ

ಆಯ್ಕೆ ವಿಧಾನ 
ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ:
ನೇಮಕಾತಿ ಸಂಚಾಲಕರು ಹಾಗೂ ಪ್ರದಾನ ವ್ಯವಸ್ಥಾಪಕರು,
ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರ.

ಉದ್ಯೋಗ ಸ್ಥಳ:
ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳು ವಿಜಯಪುರ ಜೆಲ್ಲೆಯಲ್ಲಿ ಕಾರ್ಯನಿರ್ವಹಿಸಬೇಕು.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 9 ಮಾರ್ಚ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25 ಮಾರ್ಚ್ 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

 

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

close button