ಅರೋಗ್ಯ ಇಲಾಖೆ ನೇಮಕಾತಿ 2022 : SSLC ಪಾಸ್ ಆದವರಿಗೆ

 

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಸ್.ಸಿ.ಎಸ್.ಸಿ.-ಟಿ.ಎಸ್.ಪಿ. ಅನುದಾನದಡಿ ಬೆಂಗಳೂರು ನಾರಾಯಣ ಹೃದಯಾಲಯದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನಿಗಧಿತ ದಿನಾಂಕದೊಳಗೆ ಮಾತ್ರ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಇಲಾಖೆ ಹೆಸರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಹುದ್ದೆಗಳ ಹೆಸರು: ಕೌಶಲ್ಯಾಭಿವೃದ್ಧಿ
ಒಟ್ಟು ಹುದ್ದೆಗಳು  ತಿಳಿಸಿಲ್ಲ 
ಅರ್ಜಿ ಸಲ್ಲಿಸುವ ಬಗೆ  ಆಫ್ ಲೈನ್ 

 

ವಿದ್ಯಾರ್ಹತೆ:
ತರಬೇತಿ ಅವಧಿ 6 ತಿಂಗಳಾಗಿದ್ದು, ಮಾಸಿಕ ಶಿಷ್ಯವೇತನ ಸೌಲಭ್ಯವನ್ನು ನೀಡಲಾಗುತ್ತದೆ. ಅಭ್ಯರ್ಥಿಗಳು 18 ರಿಂದ 35 ವರ್ಷದೊಳಗಿರಬೇಕು ಹಾಗೂ 10ನೇ ತರಗತಿ ಉತ್ತೀರ್ಣರಾಗಿರಬೇಕು.

ಅರ್ಜಿಯೊಂದಿಗೆ 10ನೇ ತರಗತಿ ಉತ್ತೀರ್ಣರಾದ ಬಗ್ಗೆ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ, ವಿಳಾಸದ ಬಗ್ಗೆ ದಾಖಲೆ, ಪಾಸ್ ಪೋರ್ಟ್ ಅಳತೆಯ ಫೋಟೋ, ಆಧಾರ್ ಕಾರ್ಡ್ ಪ್ರತಿ ಸಲ್ಲಿಸಬೇಕು. ತರಬೇತಿ ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರದ ಜತೆಗೆ, ಉದ್ಯೋಗ ಅವಕಾಶ ಸೌಲಭ್ಯ ನೀಡುವ ಸಾಧ್ಯತೆ ಇರುತ್ತದೆ.

ಈ ಕುರಿತು ಮತ್ತಷ್ಟು ಮಾಹಿತಿಗಾಗಿ ಬೆಂಗಳೂರು ನಾರಾಯಣ ಹೃದಯಾಲಯದ ಶ್ರೀಮತಿ ಕೌಸಲ್ಯಾದೇವಿ ಮೊ.8582580807 ಹಾಗೂ ವ್ಯವಸ್ಥಾಪಕರಾದ ವಿಕಾಶ್‌ ಮೊ.7018879650 ಸಂಖ್ಯೆಗೆ ಸಂಪರ್ಕಿಸಲು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು
ಎಸ್‌ಎಸ್‌ಎಲ್‌ಸಿ ಪಾಸಾದ ಪ್ರಮಾಣ ಪತ್ರ
ಜಾತಿ ಪ್ರಮಾಣಪತ್ರ

ವಿಳಾಸದ ಬಗ್ಗೆ ದಾಖಲೆ
ಪಾಸ್ ಪೋರ್ಟ್ ಅಳತೆಯ ಫೋಟೋ
ಆಧಾರ್ ಕಾರ್ಡ್ ಪ್ರತಿ

ಅರ್ಜಿ ಸಲ್ಲಿಸಲು ಕೊನೆ ದಿನಾಂಕದ ಕುರಿತು ಸಹ ಮೇಲೆ ತಿಳಿಸಲಾದ ಸಂಪರ್ಕ ಸಂಖ್ಯೆಗಳಿಗೆ ಕರೆ ಮಾಡಿ ತಿಳಿಯಬಹುದು.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪೈಕಿ ಎಸ್‌ಎಸ್‌ಎಲ್‌ಸಿ ಅಂಕಗಳ ಆಧಾರದಲ್ಲಿ ಅಗತ್ಯದಷ್ಟು ಅಭ್ಯರ್ಥಿಗಳನ್ನು ಮೆರಿಟ್‌ ಆಧಾರದಲ್ಲಿ ಶಾರ್ಟ್‌ ಲಿಸ್ಟ್‌ ಮಾಡಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ : ಬೆಂಗಳೂರು ನಾರಾಯಣ ಹೃದಯಾಲಯ, ಬೆಂಗಳೂರು.

 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!