ಹೊಸ ನೇಮಕಾತಿ ಅಧಿಸೂಚನೆ 2024
Karnataka Apex Bank Recruitment 2024 – ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ |
ಹುದ್ದೆಗಳ ಹೆಸರು: | ಬ್ಯಾಂಕ್ ಸಹಾಯಕರು |
ಒಟ್ಟು ಹುದ್ದೆಗಳು | 93 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಅರ್ಜಿ ಅರ್ಭ್ಯರ್ಥಿಗಳು ಯಾವುದೇ ಪದವಿ ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಸಹಕಾರ ವಿಷಯದಲ್ಲಿ ವಿದ್ಯಾರ್ಹತೆ ಮತ್ತು ಅನುಭವವನ್ನು ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
(ಸಾಮಾನ್ಯ, ಹಿಂದುಳಿದ ವರ್ಗದ ಅಭ್ಯರ್ಥಿಗಳು ಕನಿಷ್ಠ ಶೇಕಡ 55 ರಷ್ಟು ಅಂಕಗಳೊಂದಿಗೆ, ಪ.ಜಾತಿ/ ಪ.ಪಂ./ ಅಂಗವಿಕಲ ಅಭ್ಯರ್ಥಿಗಳು ಕನಿಷ್ಠ ಶೇ. 50 ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು)
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಯೋಮಿತಿ:
ಅರ್ಜಿ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
– ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
– ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
– ಪ.ಜಾತಿ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 28,425 ರಿಂದ ರೂ. 87,125 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
– ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು – ರೂ. 1000
– ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1ರ ಅಭ್ಯರ್ಥಿಗಳು – ರೂ. 500
(ಅಭ್ಯರ್ಥಿಗಳು ಆನ್ಲೈನ್ ಮೂಲಕ ಶುಲ್ಕ ಪಾವತಿಸಬಹುದು.)
ಆಯ್ಕೆ ವಿಧಾನ:
ಈ ಅರ್ಜಿಗಳ ಪರಿಶೀಲನೆಯ ನಂತರ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಮೌಖಿಕ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಅರ್ಹತೆ ಆಧಾರದ ಮೇಲೆ ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ಮೌಖಿಕ ಸಂದರ್ಶನಕ್ಕೆ ಕರೆಯಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಶೇಕಡ 85ಕ್ಕೆ ಲೆಕ್ಕಾಚಾರ ಮಾಡಲಾಗುವುದು ಹಾಗೂ ಮೌಖಿಕ ಸಂದರ್ಶನಕ್ಕೆ 15 ಅಂಕಗಳನ್ನು ನಿಗದಿ ಪಡಿಸಿದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 07 ಮಾರ್ಚ್ 2024 |
ಅರ್ಜಿ ಸಲಿಸಲು ಕೊನೆಯ ದಿನಾಂಕ – 06 ಏಪ್ರಿಲ್ 2024 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |