ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ ಖಾಲಿ ಇರುವ 150 ಬೆರಳಚ್ಚುಗಾರರ ಹುದ್ದೆ ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಅರ್ಜಿಗಳನ್ನು ಸ್ವೀಕರಿಸುವುದಕ್ಕೆ ನಿಗದಿಪಡಿಸಿರುವ ಕೊನೆಯ ದಿನಾಂಕದವರೆಗೂ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಕೆಳಗಿನ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಹುದ್ದೆಯ ಹೆಸರು : ಬೆರಳಚ್ಚುಗಾರ
ಹುದ್ದೆಗಳ ಸಂಖ್ಯೆ: 150
ವಿದ್ಯಾರ್ಹತೆ
ಯಾವುದೇ ಪದವಿ ಪಾಸ್ ಮಾಡಿರಬೇಕು ( ವಿಜ್ಞಾನ / ಕಲೆ / ವಾಣಿಜ್ಯ / ವ್ಯವಹಾರ ನಿರ್ವಹಣೆ / ಕಂಪ್ಯೂಟರ್ ಅಪ್ಲಿಕೇಷನ್ಸ್).
ಆಂಗ್ಲ ಮತ್ತು ಕನ್ನಡದಲ್ಲಿ ಹಿರಿಯ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದರೊಂದಿಗೆ ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರುವುದು ಅತ್ಯಾವಶ್ಯಕ.
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು ಕನಿಷ್ಠ ಶೇಕಡ.55 ಅಂಕಗಳೊಂದಿಗೆ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳು ಕನಿಷ್ಠ ಶೇಕಡ.50 ಅಂಕಗಳೊಂದಿಗೆ ಪದವಿ ಪಾಸ್ ಮಾಡಿರಬೇಕು.
ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಆಯ್ಕೆಯಾದ ಅಭ್ಯರ್ಥಿಗಳು ಪ್ರಾರಂಭಿಕವಾಗಿ ಎರಡು ವರ್ಷಗಳ ಅವಧಿಗೆ ಅಥವಾ ಅಗತ್ಯವಿದ್ದರೆ ವಿಸ್ತರಿಸಬಹುದಾದ ಅವಧಿಗೆ ಪರಿವೀಕ್ಷಣಾರ್ಥಿಗಳಾಗಿರುತ್ತಾರೆ.
ವಯೋಮಿತಿ
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯೋಮಿತಿ ಅರ್ಹತೆ ವರ್ಗಾವಾರು ಈ ಕೆಳಗಿನಂತಿದೆ.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ.
ಎಸ್‌ಸಿ / ಎಸ್‌ಟಿ ವರ್ಗದ ಅಭ್ಯರ್ಥಿಗಳಿಗೆ 40 ವರ್ಷ.
ವೇತನ ಶ್ರೇಣಿ : ರೂ.25,500-81100 ರವರೆಗೆ.
ಅರ್ಜಿ ಶುಲ್ಕ
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು ರೂ.350 ಪಾವತಿಸಬೇಕು. ಇತರೆ ಅಭ್ಯರ್ಥಿಗಳು ರೂ.200 ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಅಥವಾ ಇ-ಚಲನ್ ಪಡೆದು ಪಾವತಿಸಬಹುದು.
ಪ್ರಮುಖ ದಿನಾಂಕಗಳು
ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 28-10-2021
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 27-11-2021 ರ ರಾತ್ರಿ 11-59 ರವರೆಗೆ.
Website |
Notification |