ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಎಸೆಸೆಲ್ಸಿ ಪಾಸ್ ಆದ ಅಭ್ಯರ್ಥಿಗಳಿಗೆ ಖಾಲಿ ಹುದ್ದೆಗಳು: ಹೋಮ್ ಗಾರ್ಡ್ ನೇಮಕಾತಿ ಅಧಿಸೂಚನೆ 2021

 

ಚಿತ್ರದುರ್ಗ ಜಿಲ್ಲೆಯ ವಿವಿಧ ಕಡೆ 75 ಗೃಹರಕ್ಷಕ ಸಿಬ್ಬಂದಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿಗಳನ್ನು ಭರ್ತಿ ಮಾಡಿ ಸಂಬಂಧಪಟ್ಟ ದಾಖಲೆಗಳೊಂದಿಗೆ ಸಮಾದೇಷ್ಟರು, ಗೃಹರಕ್ಷಕ ದಳ ಕಚೇರಿ, ಚಿತ್ರದುರ್ಗ ಜಿಲ್ಲೆ, ಚಿತ್ರದುರ್ಗ ಇಲ್ಲಿಗೆ ನಿಗದಿತ ಅವಧಿಯೊಳಗೆ ಸಲ್ಲಿಸಲು ಸೂಚಿಸಿದೆ. ಪುರುಷ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಚಿತ್ರದುರ್ಗ ಜಿಲ್ಲೆಯಯಲ್ಲಿ ಖಾಲಿ ಇರುವ ಗೃಹರಕ್ಷಕ ಹುದ್ದೆಗಳ ವಿವರ
ಹೊಸದಾಗಿ ಪ್ರಾರಂಭವಾಗಿರುವ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕು ಚಿತ್ರಹಳ್ಳಿ ಉಪ ಘಟಕದಲ್ಲಿ 32 ಖಾಲಿ ಸ್ಥಾನಗಳು, ಮೊಳಕಾಲ್ಮೂರು ತಾಲ್ಲೂಕು ರಾಂಪುರ ಉಪ ಘಟಕದಲ್ಲಿ 09 ಖಾಲಿ ಸ್ಥಾನಗಳು, ಚಳ್ಳಕೆರೆ ತಾಲ್ಲೂಕು ಪರಶುರಾಂಪುರ ಉಪ ಘಟಕದಲ್ಲಿ 10 ಖಾಲಿ ಸ್ಥಾನಗಳು, ಚಿತ್ರದುರ್ಗ ತಾಲ್ಲೂಕು ಭರಮಸಾಗರ ಉಪ ಘಟಕದಲ್ಲಿ 14 ಖಾಲಿ ಸ್ಥಾನಗಳು ಹಾಗೂ ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಉಪ ಘಟಕದಲ್ಲಿ 10 ಖಾಲಿ ಸ್ಥಾನಗಳು ಸೇರಿದಂತೆ ಒಟ್ಟು 75 ಖಾಲಿ ಸ್ಥಾನಗಳು ಇವೆ.

 

 

ಅರ್ಹತೆಗಳು
* ವಯಸ್ಸು: ಕನಿಷ್ಟ 19 ರಿಂದ 45 ವರ್ಷ ಒಳಗಿನವರಿರಬೇಕು.
* ವಿದ್ಯಾರ್ಹತೆ: 10ನೇ ತರಗತಿ ಉತ್ತೀರ್ಣರಾಗಿರಬೇಕು.
* ಗೃಹರಕ್ಷಕ ಸದಸ್ಯತ್ವಕ್ಕೆ ಸೇರಬಯಸುವ ಅಭ್ಯರ್ಥಿಗಳು ನಿರ್ದಿಷ್ಟ ಪ್ರದೇಶದ ಗರಿಷ್ಟ 5 ಕಿ.ಮೀ ಒಳಗಿನವರಾಗಿರಬೇಕು.
* ಯಾವುದೇ ಕ್ರಿಮಿನಲ್ ಮೊಕದ್ದಮೆ ದಾಖಲಾಗಿರಬಾರದು.
* ಯಾವುದೇ ರಾಜಕೀಯ ಪಕ್ಷದಲ್ಲಿ ಗುರುತಿಸಿಕೊಂಡಿರಬಾರದು.
* ಉತ್ತಮ ದೇಹದಾರ್ಢ್ಯತೆಯನ್ನು ಹೊಂದಿರಬೇಕು.
* ಪುರುಷರು 168 ಸೆಂ.ಮೀ ಎತ್ತರ, 50 ಕೆ.ಜಿ ತೂಕ ಇರಬೇಕು.
* ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ ಅವಕಾಶ ಇರುವುದಿಲ್ಲ.
* ಸ್ವಯಂ ಸೇವಾ ಮನೋಭಾವದಲ್ಲಿ ಆಸಕ್ತಿ ಇರುವಂತಹ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ.

ಅರ್ಜಿ ವಿತರಣೆ ಸ್ಥಳ
ಜಿಲ್ಲಾ ಗೃಹರಕ್ಷಕ ದಳ ಕಚೇರಿ, ಮೆದೇಹಳ್ಳಿ ರಸ್ತೆ, ಚಿತ್ರದುರ್ಗ ಇಲ್ಲಿ ಅರ್ಜಿಗಳು ದೊರೆಯಲಿದ್ದು, ನವೆಂಬರ್ 25ರಿಂದ ಡಿಸೆಂಬರ್ 6ರವರೆಗೆ ಅರ್ಜಿಗಳನ್ನು ವಿತರಿಸಲಾಗುವುದು. ಡಿಸೆಂಬರ್ 10, ಸಂಜೆ 5.30 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.

 

 

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ
08194-231403, ಬೋಧಕರು- 94810 47857, ಸಹಾಯಕ ಬೋಧಕರು 9481501233 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಗೃಹರಕ್ಷಕ ದಳ ಸಮಾದೇಷ್ಟರು ತಿಳಿಸಿದ್ದಾರೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 10 2021

Notification PDF 

 

close button