ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕಂಪ್ಯೂಟರ್ ಆಪರೇಟರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿ

Karnataka Legislative Assembly Recruitment 2022: ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು:ಕರ್ನಾಟಕ ವಿಧಾನಸಭೆ ಸಚಿವಾಲಯ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 43
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

 

ವಿದ್ಯಾರ್ಹತೆ:
ವರದಿಗಾರರು – ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸಿರುವ ಪ್ರವೀಣ ದರ್ಜೆಯ ಕನ್ನಡ ಶೀಘ್ರಲಿಪಿ ಹಾಗೂ ಪ್ರೌಢ ದರ್ಜೆಯ ಕನ್ನಡ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ಕಂಪ್ಯೂಟರ್ ಆಪರೇಟರ್ – ಅಂಗೀಕೃತ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಅಪ್ಲಿಕೇಷನ್ ನಲ್ಲಿ ಬ್ಯಾಚುಲರ್ಸ್ ಪದವಿ (ಬಿ.ಸಿ.ಎ) ಅಥವಾ ಬಿ.ಎಸ್ಸಿ. ಕಂಪ್ಯೂಟರ್ ಸೈನ್ಸ್ ಅಥವಾ ಎಲೆಕ್ಟ್ರಾನಿಕ್ಸ್ ಪದವಿ ಪಡೆದಿರಬೇಕು.

ಕಿರಿಯ ಸಹಾಯಕರು – ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು ಹಾಗೂ ಗಣಕಯಂತ್ರದ ಸಾಮಾನ್ಯ ಜ್ಞಾನ ಹೊಂದಿರಬೇಕು.

ಬೆರಳಚ್ಚುಗಾರರು – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಹೊಂದಿದವರಿಗೆ ಮತ್ತು ಮಾನ್ಯತೆ ಪಡೆದ ಸಂಸ್ಥೆಯಿಂದ ಗಣಕಯಂತ್ರದ ಕನಿಷ್ಠ 1 ವರ್ಷದ ತರಬೇತಿ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಪ್ರೌಢ ದರ್ಜೆಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ದಲಾಯತ್ – 7ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

 

 

ವಯೋಮಿತಿ:
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ
ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ,
ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ,
ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.

 

ವೇತನಶ್ರೇಣಿ:

ಹುದ್ದೆಗಳು ವೇತನಶ್ರೇಣಿ 
ವರದಿಗಾರರುರೂ.37900/- ರೂ.70850
ಕಂಪ್ಯೂಟರ್ ಆಪರೇಟರ್ರೂ.37900-ರೂ.70850
ಕಿರಿಯ ಸಹಾಯಕರುರೂ.21400-ರೂ.42000
ಬೆರಳಚ್ಚುಗಾರರುರೂ.21400-ರೂ.42000
ದಲಾಯತ್ರೂ.17000-ರೂ.28950

 

ಅರ್ಜಿ ಶುಲ್ಕ:
ಪ. ಜಾತಿ, ಪ. ಪಂ ಹಾಗೂ ಪ್ರ1 ರ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
ಉಳಿದ ಸಾಮಾನ್ಯ ವರ್ಗದ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಕ್ರಾಸ್ ಮಾಡಿದ ರೂ. 500 ರ ಇಂಡಿಯನ್ ಪೋಸ್ಟಲ್ ಆರ್ಡರ್ ಅನ್ನು ಅಧಿಸೂಚನೆ ಹೊರಡಿಸಿರುವ ದಿನಾಂಕದಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಿರುವಂತೆ ಖರೀದಿಸಿ, ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು – 560001 ಈ ವಿಳಾಸಕ್ಕೆ ಪಾವತಿ ಮಾಡಬೇಕು.

ಅರ್ಜಿ ಸಲ್ಲಿಸುವ ವಿಳಾಸ :
ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ,

ಅಂಚೆ ಪೆಟ್ಟಿಗೆ ಸಂಖ್ಯೆ 5074, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು – 560001

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಏಪ್ರಿಲ್ 26, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 27, 2022
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 

 

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

close button