ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್: ಕಂದಾಯ ಇಲಾಖೆ ಬೃಹತ್ ನೇಮಕಾತಿ 2022 | Karnataka Village Accountant Recruitment 2022

ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟ 2022

Karnataka Village Accountant Recruitment 2022: ರಾಜ್ಯ ಕಂದಾಯ ಇಲಾಖೆಯು ರಾಜ್ಯದ ವಿವಿಧ ಕಡೆ 355 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಸಂಸ್ಥೆ: ಕರ್ನಾಟಕ ಕಂದಾಯ ಇಲಾಖೆ
ಹುದ್ದೆಯ ಹೆಸರು: ಗ್ರಾಮ ಲೆಕ್ಕಾಧಿಕಾರಿ
ಒಟ್ಟು ಹುದ್ದೆಗಳು 355

ಜಿಲ್ಲಾವಾರು ಹುದ್ದೆಗಳ ವಿವರ:
ಚಾಮರಾಜನಗರ- 40, ಬೆಂಗಳೂರು-11, ಉಡುಪಿ-18, ರಾಮನಗರ-1, ಚಿತ್ರದುರ್ಗ-59 ಶಿವಮೊಗ್ಗ-69, ಹಾಸನ- 34, ಮಂಡ್ಯ-54, ರಾಯಚೂರು-51, ದಾವಣಗೆರೆ-18

ಉದ್ಯೋಗಾವಕಾಶ 2022: ನೀರಾವರಿ ಇಲಾಖೆ ಖಾಲಿ ಹುದ್ದೆಗಳ  ನೇಮಕಾತಿ 2022

ರಾಜ್ಯದ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಗ್ರಾಮ ಲೆಕ್ಕಿಗರ ನೇರ ನೇಮಕಾತಿಗೆ ಆದೇಶ ಹೊರಡಿಸಿರುವ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ” ಆಯಾ ಜಿಲ್ಲೆಗಳಲ್ಲಿ ಖಾಲಿ ಇರುವ
ಗ್ರಾಮಲೆಕ್ಕಿಗರ ಹುದ್ದೆಯಲ್ಲಿ ಶೇಕಡ 30ಕ್ಕಿಂತ ಹೆಚ್ಚಿನ ಹುದ್ದೆಗಳು ಖಾಲಿ ಇದ್ದು, ಸದರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿ. ಅಂತಿಮ ನೇಮಕಾತಿ ಆದೇಶವನ್ನು ಹೊರಡಿಸುವ ಮುನ್ನ ಆಯವ್ಯಯದಲ್ಲಿ ಅನುದಾನದ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಕಡ್ಡಾಯವಾಗಿ ಸರ್ಕಾರದ ಅನುಮತಿಯನ್ನು ಪಡೆಯಲು ಅಗತ್ಯ ಕ್ರಮ ವಹಿಸಿ,” ಎಂದು ಹೇಳಿದ್ದಾರೆ.

ವಿದ್ಯಾರ್ಹತೆ:
ಕಂದಾಯ ಇಲಾಖೆ ಗ್ರಾಮ ಲೆಕ್ಕಿಕಗರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು.

ವಯೋಮಿತಿ:
ಕರ್ನಾಟಕ ಕಂದಾಯ ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಗ್ರಾಮ ಲೆಕ್ಕಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-35 ವರ್ಷದೊಳಗಿರಬೇಕು.

ವಯೋಮಿತಿ ಸಡಿಲಿಕೆ:
ಪ್ರವರ್ಗ 2ಎ, ಬಿB, 3ಎ, 3ಬಿ ಅಭ್ಯರ್ಥಿಗಳಿಗೆ: 3 ವರ್ಷಗಳು
ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ: 5 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳಿಗೆ: 10 ವರ್ಷಗಳು

ಅರ್ಜಿ ಶುಲ್ಕ:
ಪ್ರವರ್ಗ 2ಎ, ಬಿB, 3ಎ, 3ಬಿ ಅಭ್ಯರ್ಥಿಗಳಿಗೆ: 200 ರೂ.
ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ: 100 ರೂ.

ಉದ್ಯೋಗಾವಕಾಶ 2022: ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಹುದ್ದೆಗಳ ಭರ್ತಿ 2022

ಆಯ್ಕೆ ವಿಧಾನ: ಅಭ್ಯರ್ಥಿಗಳು ದ್ವಿತೀಯ ಪಿಯುಸಿ’ಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಮೆರಿಟ್‌ ಲಿಸ್ಟ್‌ ಸಿದ್ಧಪಡಿಸಿ, ಮೂಲ ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

NOTIFICATION

error: Content is protected !!