KCC Bank Recruitment 2022 । KCC ಬ್ಯಾಂಕ್ ನೇಮಕಾತಿ ಅಧಿಸೂಚನೆ 2022

ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತ

ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

 

 

 

ಇಲಾಖೆ ಹೆಸರು: ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತ
ಹುದ್ದೆಗಳ ಹೆಸರು: ಸಿಪಾಯಿ ( ಪಿಯೋನ್)
ಒಟ್ಟು ಹುದ್ದೆಗಳು  52
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ 
ಉದ್ಯೋಗ ಸ್ಥಳ  ಧಾರವಾಡ

 

ವಿದ್ಯಾರ್ಹತೆ:
ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.

ವಯೋಮಿತಿ:
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ
ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ,
ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ,
ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

 

 

 

ಉದ್ಯೋಗ ಮಾಹಿತಿ: ಗ್ರಂಥಾಲಯ ಇಲಾಖೆ ನೇಮಕಾತಿ ಅಧಿಸೂಚನೆ 2022

ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳು ರೂ. 500
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ಅಂಗವಿಕಲ/ಮಾಜಿ ಸೈನಿಕ/ ವಿಧವಾ ಅಭ್ಯರ್ಥಿಗಳು ರೂ. 250 
ಡಿಮ್ಯಾಂಡ್ ಡ್ರಾಫ್ಟ್ (ಡಿಡಿ) ಅನ್ನು “ಸದಸ್ಯ ಕಾರ್ಯದರ್ಶಿ, ನೇಮಕಾತಿ ಸಮಿತಿ ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು, ಕೆ.ಸಿ.ಸಿ ಬ್ಯಾಂಕ್ ಲಿ.,ಧಾರವಾಡ” ಈ ಹೆಸರಿನಲ್ಲಿ ಪಡೆದು ಸಲ್ಲಿಸತಕ್ಕದ್ದು.

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 12,500 – ರೂ. 24,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ 
ಶೆಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ  ಗಳಿಸಿದ ಅಂಕಗಳನ್ನು ಪರಿಗಣಿಸಿ, ಅಂಕಗಳ ಶೇಕಡಾವಾರು ಮೆರಿಟ್ ಆಧಾರದ ಮೇಲೆ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು, ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಶೇಕಡಾ 85ಕ್ಕಿಳಿಸಿ ಉಳಿದ ಪ್ರತಿಶತ 15 ಅಂಕಗಳನ್ನು ಸಂದರ್ಶನಕ್ಕೆ ನೀಡಲಾಗುವುದು. ಸದರಿ ಅಂಕಗಳನ್ನು ಒಟ್ಟು ಸೇರಿಸಿ ರ್ಯಾಂಕಿಂಗ್ ಆಧಾರದಲ್ಲಿ ಆಯ್ಕೆ ಮಾಡಲಾಗುವುದು.

 

 

ಅರ್ಜಿ ಸಲ್ಲಿಸುವ ವಿಳಾಸ :
ಸದಸ್ಯ ಕಾರ್ಯದರ್ಶಿ, ನೇಮಕಾತಿ ಸಮಿತಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಕೆ.ಸಿ.ಸಿ ಬ್ಯಾಂಕ್ ಲಿ., ಪ್ರಧಾನ ಕಛೇರಿ, ಸುಭಾಸ ರೋಡ, ಧಾರವಾಡ – 580001

ಸಲ್ಲಿಸಬೇಕಾದ ಅಗತ್ಯ ದಾಖಲಾತಿಗಳು:

  • ಎಸ್.ಎಸ್.ಎಲ್.ಸಿ ಅಂಕ ಪಟ್ಟಿ
  • ಸ್ವ ಹಸ್ತಾಕ್ಷರವಿರುವ ಇತ್ತೀಚಿನ 3 ಭಾವಚಿತ್ರ
  • ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗದ ಮತ್ತು ಗ್ರಾಮೀಣ ಅಭ್ಯರ್ಥಿ/ ಕನ್ನಡ ಮಾಧ್ಯಮ/ ಮಾಜಿ ಸೈನಿಕ ಅಭ್ಯರ್ಥಿ/ ಅಂಗವಿಕಲ ಅಭ್ಯರ್ಥಿ ಮೀಸಲಾತಿ ಸೌಲಭ್ಯ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಸರ್ಕಾರ ನಿಗದಿಪಡಿಸಿದ ನಮೂನೆಯಲ್ಲಿ ಸಂಬಂಧಿಸಿದ ಪ್ರಾಧಿಕಾರದಿಂದ ದೃಢೀಕರಣ ಪಡೆದ ಚಾಲ್ತಿಇರುವ ಪ್ರಮಾಣ ಪತ್ರಗಳ ಪ್ರತಿಗಳನ್ನು ಕಡ್ಡಾಯವಾಗಿ ಸಲ್ಲಿಸತಕ್ಕದ್ದು ಮತ್ತು ಮೂಲ ಪ್ರತಿಗಳನ್ನು ಸಂದರ್ಶನ / ಪರಿಶೀಲನೆ ಕಾಲಕ್ಕೆ ಸಲ್ಲಿಸತಕ್ಕದ್ದು.
  • ಅಭ್ಯರ್ಥಿಗಳು ತಮ್ಮ ವಿಳಾಸ ಸಮರ್ಥಿಸಲು ಅಗತ್ಯ ದಾಖಲಾತಿ ಸಲ್ಲಿಸಬೇಕು. (ಆಧಾರ್ ಕಾರ್ಡ್/ ವೋಟರ್ ಐಡಿ/ ಪ್ಯಾನ್ ಕಾರ್ಡ್/ ಡ್ರೈವಿಂಗ್ ಲೈಸೆನ್ಸ್)
    ( ಈ ಎಲ್ಲಾ ದಾಖಲಾತಿಗಳನ್ನು ಗೆಜೆಟೇಡ್ ಅಧಿಕಾರಿಯಿಂದ ದೃಢೀಕರಿಸಿ ಪ್ರತಿಯನ್ನು ಲಗತ್ತಿಸಬೇಕು)

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಜನವರಿ 29, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಫೆಬ್ರವರಿ 19, 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  Click Here 
ನೋಟಿಫಿಕೇಶನ್  Click Here 
ಅರ್ಜಿ ಫಾರ್ಮ್   Click Here 

 

error: Content is protected !!