ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಡಿಸಿಸಿ ಬ್ಯಾಂಕ್ ನೇಮಕಾತಿ 2022 : ಸಂಬಳ ರೂ. 27,650/-

KDCC Bank Recruitment 2022: ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಒಪರೇಟಿವ್ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ-ಒಪರೇಟಿವ್ ಬ್ಯಾಂಕ್ ನಿಯಮಿತ
ಹುದ್ದೆಗಳ ಹೆಸರು:ಕಿರಿಯ ಗುಮಾಸ್ತರು/ ಕಿರಿಯ ಮೇಲ್ವಿಚಾರಕರು
ಒಟ್ಟು ಹುದ್ದೆಗಳು 41

ವಿದ್ಯಾರ್ಹತೆ:
ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದ ಪದವಿಯಲ್ಲಿ ಕನಿಷ್ಠ ಶೇಕಡಾ 60ರಷ್ಟು ಗುಣಾಂಕ ಪಡೆದ ಪದವೀಧರರು ಮಾತ್ರ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಆಪರೇಟಿಂಗ್ ಮತ್ತು ಅಪ್ಲಿಕೇಶನ್ ಜ್ಞಾನ ಹೊಂದಿರಬೇಕು. ಅಭ್ಯರ್ಥಿಗಳು ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಓದುವ, ಬರೆಯುವ, ಮಾತನಾಡುವ, ಅರ್ಥಮಾಡಿಕೊಳ್ಳುವ ಜ್ಞಾನ ಹೊಂದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,650 – ರೂ. 52,650 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಪ‌.ಜಾತಿ, ಪ.ಪಂ., ಪ್ರ1 ಅಭ್ಯರ್ಥಿಗಳು ರೂ. 295, ಸಾಮಾನ್ಯ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ರೂ. 590 ಅನ್ನು ಕೆಡಿಸಿಸಿ ಬ್ಯಾಂಕಿನ ಯಾವುದೇ ಶಾಖೆಯಲ್ಲಿ ಚಾಲ್ತಿ ಖಾತೆಗೆ 122000553848 ಜಮಾಪಡಿಸಿ, ಚಲನ್ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ :
ವ್ಯವಸ್ಥಾಪಕ ನಿರ್ದೇಶಕರು, ಕೆನರಾ ಡಿ.ಸಿ.ಸಿ ಬ್ಯಾಂಕ್ ಲಿ.,

ಪ್ರಧಾನ ಕಛೇರಿ, ಹೊಸ ಮಾರುಕಟ್ಟೆ, ಶಿರಸಿ – 581 402 (ಉ.ಕ)

ಆಯ್ಕೆ ವಿಧಾನ:
ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ, ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ 1:5 ರ ಅನುಪಾತದಲ್ಲಿ ಮೌಖಿಕ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಬ್ಯಾಂಕಿನಿಂದ ಅರ್ಜಿ ಫಾರ್ಮ್ ಪಡೆಯಲು ಕೊನೆಯ ದಿನಾಂಕ : ಸೆಪ್ಟೆಂಬರ್ 08, 2022
ಭರ್ತಿ ಮಾಡಿದ ಅರ್ಜಿ ಕಛೇರಿಗೆ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 10, 2022
  

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

 

close button