ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೃಹತ್ ನೇಮಕಾತಿ ಅಧಿಸೂಚನೆ 2021

Telegram Group


ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ 1242 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 06-11-2021 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಯನ್ನು ಈ ಕೆಳಕಂಡ ವಿಷಯಗಳಿಗೆ ನಡೆಸಲಾಗುವುದು : ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಶಿಕ್ಷಣಶಾಸ್ತ್ರ, ಕಾನೂನು, ಸಮಾಜಶಾಸ್ತ್ರ, ಭೂಗೋಳಶಾಸ್ತ್ರ, ಭೂಗರ್ಭಶಾಸ್ತ್ರ, ವಾಣಿಜ್ಯಶಾಸ್ತ್ರ, ನಿರ್ವಹಣಾ ಶಾಸ್ತ್ರ, ಭೌತಶಾಸ್ತ್ರ, ರಸಾಯನ ಶಾಸ್ತ್ರ, ಜೈವಿಕ ರಸಾಯನಶಾಸ್ತ್ರ, ಗಣಿತಶಾಸ್ತ್ರ, ಸೂಕ್ಷ್ಮ ಜೀವಶಾಸ್ತ್ರ, ಪ್ರಾಣಿಶಾಸ್ತ್ರ, ಸಸ್ಯಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ, ಸಂಖ್ಯಾಶಾಸ್ತ್ರ & ಫ್ಯಾಷನ್ ಟೆಕ್ನಾಲಜಿ


ಒಟ್ಟು ಹುದ್ದೆಗಳು: 1241

ಉದ್ಯೋಗ ಸ್ಥಳ: ಕರ್ನಾಟಕ

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಖಾಲಿ ಇರುವ ವಿಷಯಕ್ಕೆ ಸಂಬಂಧಿಸಿದಂತೆ ಸ್ನಾತಕೋತ್ತರ ಪದವಿ ಜೊತೆಗೆ NET / KSET / Phd ಪರೀಕ್ಷೆಯಲ್ಲಿ ಅರ್ಹತೆ ಪಡೆದಿರಬೇಕು.
ವಿದ್ಯಾರ್ಹತೆಯ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

ವಯೋಮಿತಿ:
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 22 ವರ್ಷಗಳು ತುಂಬಿರ ತಕ್ಕದ್ದು ಹಾಗೂ ಈ ಕೆಳಕಂಡ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
ಎ) ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 40 ವರ್ಷಗಳು.
ಬಿ) ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 43 ವರ್ಷಗಳು.
ಸಿ) ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಪ್ರವರ್ಗ-1 ರ ಅಭ್ಯರ್ಥಿಗಳಿಗೆ 45 ವರ್ಷಗಳು.

ವೇತನ ಶ್ರೇಣಿ:
ಯುಜಿಸಿ ವೇತನ ಶ್ರೇಣಿ57700/- ರಿಂದ 182400/-

ಅರ್ಜಿ ಶುಲ್ಕ:
1). ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಗಳ (ಪ್ರವರ್ಗ-2ಎ / 2ಬಿ, 3ಎ / 3ಬಿ) ರ ಅಭ್ಯರ್ಥಿಗಳಿಗೆ 2000/-
2). ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳಿಗೆ 1000/-
3). ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯ್ತಿ ಇದೆ. ( ಶೇ 40 ಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರುವವರು ಮತ್ತು ಅದಕ್ಕೆ ಸಂಬಂಧಿಸಿದಂತೆ ಜಿಲ್ಲಾ ವೈದ್ಯಾಧಿಕಾರಿಗಳಿಂದ ಪ್ರಮಾಣ ಪತ್ರ ಹೊಂದಿರುವವರು)

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಪರೀಕ್ಷಾ ಕೇಂದ್ರಗಳು: ಸ್ಪರ್ಧಾತ್ಮಕ ಪರೀಕ್ಷೆಯನ್ನು ಬೆಂಗಳೂರು, ಮೈಸೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಕಲಬುರಗಿ, ಮತ್ತು ಮಂಗಳೂರು, ಸ್ಥಳಗಳಲ್ಲಿ ನಡೆಸಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 7 ಅಕ್ಟೋಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 6 ನವೆಂಬರ್ 2021

Notification 
Telegram Group
error: Content is protected !!