ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಅಹ್ವಾನ 2022 | KSSCL Recruitment 2022

 

KSSCL Recruitment 2022: ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ
ಹುದ್ದೆಗಳ ಹೆಸರು:ಸಹಾಯಕ ವ್ಯವಸ್ಥಾಪಕರು (ಕಾರ್ಯಾಚರಣೆ), ಹಿರಿಯ ಸಹಾಯಕರು, ಕಿರಿಯ ಸಹಾಯಕರು, ಬೀಜ ಸಹಾಯಕರು
ಒಟ್ಟು ಹುದ್ದೆಗಳು 32 ಹುದ್ದೆಗಳ ಭರ್ತಿ
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

 

ವಿದ್ಯಾರ್ಹತೆ:
ಸಹಾಯಕ ವ್ಯವಸ್ಥಾಪಕರು (16 ) ಹುದ್ದೆಗೆಳಿಗೆ  ಬಿಎಸ್ಸಿ (ಕೃಷಿ) ಪದವಿಯನ್ನು ಮಾನ್ಯತೆ ಪಡೆದ ಕೃಷಿ ವಿಶ್ವವಿದ್ಯಾಲಯ ಅಥವಾ ಐಸಿಎಆರ್ ಅಥವಾ ಎಐಸಿಟಿಇ ಯ ಮಾನ್ಯತೆ ಹೊಂದಿರುವ ಕಾನೂನಿನನ್ವಯ ಸ್ಥಾಪಿತವಾದ ಇತರೇ ಯಾವುದೇ ವಿಶ್ವವಿದ್ಯಾಲಯದಿಂದ ಪದವಿಯನ್ನು ಹೊಂದಿರಬೇಕು.
ವೇತನಶ್ರೇಣಿ: ರೂ.40900/- – ರೂ.78200/-

ಹಿರಿಯ ಹಾಗೂ ಕಿರಿಯ ಸಹಾಯಕರು (10) ಹುದ್ದೆಗೆಳಿಗೆ  ಭಾರತದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಕಾಂ / ಬಿಬಿಎಂ ಪದವಿಯನ್ನು ಹೊಂದಿರಬೇಕು ಜೊತೆಗೆ ಟ್ಯಾಲಿ ಸರ್ಟಿಫಿಕೇಟ್ ಹೊಂದಿರಬೇಕು.
ವೇತನಶ್ರೇಣಿ: ರೂ.27650-ರೂ.52650

ಬೀಜ ಸಹಾಯಕರು (06 ) ಹುದ್ದೆಗೆಳಿಗೆ  ಕೃಷಿಯಲ್ಲಿ 2 ವರ್ಷದ ಡಿಪ್ಲೊಮಾ (ಕೃಷಿ)ಯನ್ನು ಮಾನ್ಯತೆ ಪಡೆದ ಕೃಷಿ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
ವೇತನಶ್ರೇಣಿ: ರೂ.21400-ರೂ.42000

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ,
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 750
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 500
ಮಾಜಿ ಸೈನಿಕ ಅಭ್ಯರ್ಥಿಗಳು ರೂ. 250
ಎಸ್ಸಿ, ಎಸ್ಟಿ, ಪ್ರ 1, ಅಂಗವಿಕಲ ಅಭ್ಯರ್ಥಿಗಳು ರೂ. 250
(ಅರ್ಜಿ ಶುಲ್ಕವನ್ನು ಯಾವುದೇ ಇ-ಅಂಚೆ ಕಛೇರಿಯ ಮೂಲಕ ಪಾವತಿಸಬೇಕು.)

ಆಯ್ಕೆ ವಿಧಾನ:
ಸಹಾಯಕ ವ್ಯವಸ್ಥಾಪಕರು ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು. ಉಳಿದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಜೂನ್ 22, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 20, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕಜುಲೈ 25, 2022
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
close button