ರಾಜ್ಯದ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ ಮತ್ತು ಇತರೆ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದ್ದು, ಅರ್ಜಿ ಆಹ್ವಾನಿಸಲಾಗಿತ್ತು. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು ಇದೀಗ ವಿಸ್ತರಿಸಲಾಗಿದೆ. ಇದೀಗ ದಿನಾಂಕ ವಿಸ್ತರಣೆ ಮಾಡಿ ನವೆಂಬರ್ 30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಬೇಗ ಬೇಗ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ
ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ 02
ಪ್ರಥಮ ದರ್ಜೆ ಸಹಾಯಕರು 09
ತಾಂತ್ರಿಕ ಮೇಲ್ವಿಚಾರಕರು 05
ತಾಂತ್ರಿಕ ಸಹಾಯಕರು 13
ವಿದ್ಯಾರ್ಹತೆ
ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ (ಯಾವುದೇ ವಿಷಯ)
ಪ್ರಥಮ ದರ್ಜೆ ಸಹಾಯಕರು ಪದವಿ .
ತಾಂತ್ರಿಕ ಮೇಲ್ವಿಚಾರಕರು ಹುದ್ದೆಗಳಿಗೆ ಬಿಎಸ್ಸಿ/ ಡಿಪ್ಲೊಮ ಪಾಸ್
ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಐಟಿಐ ಪಾಸ್
ಅರ್ಜಿ ಶುಲ್ಕ
ಸಾಮಾನ್ಯ ವರ್ಗ / ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ.800.
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.400.
ಅಂಗವಿಕಲ / ದಿವ್ಯಾಂಗ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
ವಯೋಮಿತಿ
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಪೂರೈಸಿರಬೇಕು. ಸಾಮಾನ್ಯ ಅಭ್ಯರ್ಥಿಗೆ 35 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ, ಎಸ್‌ಸಿ / ಎಸ್‌ಟಿ / ಪ್ರ-1 ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿ ಸೆಲೆಕ್ಷನ್ ಮಾಡಲಾಗುತ್ತದೆ.
ಪರೀಕ್ಷಾ ಕೇಂದ್ರಗಳು
ಬೆಂಗಳೂರು, ಬೆಳಗಾವಿ, ಬೀದರ್, ದಾವಣಗೆರೆ, ಧಾರವಾಡ, ಹುಬ್ಬಳ್ಳಿ, ಕಲಬುರಗಿ, ಮಂಡ್ಯ, ಮೈಸೂರು, ಶಿವಮೊಗ್ಗ, ಮಂಗಳೂರು, ಉಡುಪಿ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 25-10-2021
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 30-11-2021
ಶುಲ್ಕವನ್ನು ಪಾವತಿಸಲು ಕೊನೆ ದಿನಾಂಕ: 30-11-2021
Website |
Notification PDF |