ರಾಜ್ಯದಲ್ಲಿ FDA ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

 

 

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಒಟ್ಟು ಹುದ್ದೆಗಳು: 29
ಉದ್ಯೋಗ ಸ್ಥಳ: ಕರ್ನಾಟಕ

ವಿದ್ಯಾರ್ಹತೆ ಮತ್ತು ಹುದ್ದೆಗಳ ವಿವರ

1) ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳು ಹುದ್ದೆಗೆ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.

2) ಪ್ರಥಮ ದರ್ಜೆ ಸಹಾಯಕರು ಹುದ್ದೆಗೆ ಭಾರತದಲ್ಲಿ ಕಾನೂನು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಬ್ಯಾಚುಲರ್ ಪದವಿಯನ್ನು ಹೊಂದಿರಬೇಕು ಜೊತೆಗೆ 3 ತಿಂಗಳಿಗಿಂತ ಕಡಿಮೆಯಿಲ್ಲದಂತೆ ಮಾನ್ಯತೆ ಪಡೆದ ಸಂಸ್ಥೆಯಿಂದ ಮೂಲಭೂತ ಕಂಪ್ಯೂಟರ್ ತರಬೇತಿಯಲ್ಲಿ ಉತ್ತೀರ್ಣರಾಗಿರಬೇಕು.

3)ತಾಂತ್ರಿಕ ಮೇಲ್ವಿಚಾರಕರು ಹುದ್ದೆಗೆ ಭಾರತದಲ್ಲಿ ಕಾನೂನಿನಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮತ್ತು ಸಂಸ್ಥೆಗಳಿಂದ ಬಿ.ಎಸ್ಸಿ ಅಥವಾ ಡಿಪ್ಲೋಮಾ ಮೆಕ್ಯಾನಿಕಲ್ / ಎಲೆಕ್ಟ್ರಿಕಲ್ / ಸಿವಿಲ್ / ಎಲೆಕ್ಟ್ರಾನಿಕ್ಸ್ / ಕಂಪ್ಯೂಟರ್ ಸೈನ್ಸ್ / ಟೆಲಿ-ಕಮ್ಯುನಿಕ್ಷನ್ / ಆಟೋ-ಮೊಬೈಲ್ / ಟೆಕ್ಸ್ಟೈಲ್ / ಮೆಟಲರ್ಜಿ ಮತ್ತು ಕೆಮಿಕಲ್ ಇಂಜಿನಿಯರಿಂಗ್ / ಫುಡ್ ತಂತ್ರಜ್ಞಾನದಲ್ಲಿ ಪದವಿಯನ್ನು ಹೊಂದಿರಬೇಕು.

4) ತಾಂತ್ರಿಕ ಸಹಾಯಕರು ಹುದ್ದೆಗೆ ಮಾನ್ಯತೆ ಪಡೆದ ಸಂಸ್ಥೆಯಿಂದ (ಕೈಗಾರಿಕಾ ತರಬೇತಿ ಸಂಸ್ಥೆ) ITI ಪ್ರಮಾಣಪತ್ರವನ್ನು ಹೊಂದಿರಬೇಕು.

 

 

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ / ಪ್ರವರ್ಗ -2 ( ಎ ) / 2 ( ಬಿ ) / 3 ( ಎ ) / 3 ( ಬಿ ) ಗೆ ಸೇರಿದ ಅಭ್ಯರ್ಥಿಗಳಿಗೆ ರೂ. 800/-
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ -1 / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 400/-
ಅಂಗವಿಕಲ / ದಿವ್ಯಾಂಗ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ.

ವಯೋಮಿತಿ:
ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಗರಿಷ್ಠ : ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷ ವಯೋಮಿತಿಯನ್ನು ಮೀರಿರಬಾರದು.
ಪ್ರವರ್ಗ -II(a), II(b) , III(a), III(b).ಅಭ್ಯರ್ಥಿಗಳಿಗೆ 38 ವರ್ಷ ವಯೋಮಿತಿಯನ್ನು ಮೀರಿರಬಾರದು.
ಪ.ಜಾ / ಪ.ಪಂ. / ಪ್ರ -1 ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿಯನ್ನು ಮೀರಿರಬಾರದು.

ವೇತನ ಶ್ರೇಣಿ:
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಈ ಕೆಳಗಿನಂತೆ ವೇತನವನ್ನು ಪಡೆಯುತ್ತಾರೆ.
1) ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳು ಹುದ್ದೆಗೆ ರೂ. 45,300/- ರಿಂದ ರೂ. 88,300/-
2) ಪ್ರಥಮ ದರ್ಜೆ ಸಹಾಯಕರು ಹುದ್ದೆಗೆ ರೂ. 27,650/- ರಿಂದ ರೂ. 52,650/-
3) ತಾಂತ್ರಿಕ ಮೇಲ್ವಿಚಾರಕರು ಹುದ್ದೆಗೆ ರೂ. 27,650/- ರಿಂದ ರೂ. 52,650/-
4) ತಾಂತ್ರಿಕ ಸಹಾಯಕರು ಹುದ್ದೆಗೆ ರೂ. 21,400/- ರಿಂದ ರೂ. 42,000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

 

 

ಆಯ್ಕೆ ವಿಧಾನ:
ಖಾದಿ ಮಂಡಳಿಯು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಮೆರಿಟ್ ಆಧಾರದ ಮೇಲೆ ಮತ್ತು ಚಾಲ್ತಿಯಲ್ಲಿರುವ ಮೀಸಲಾತಿ ನೀತಿಯನ್ನು ಅನುಸರಿಸಿ ಅಭ್ಯರ್ಥಿಗಳು ಹುದ್ದೆಗಳಿಗೆ ಹಾಗೂ ನೀಡಿರುವ ಆಧ್ಯತೆಯನ್ವಯ ಪ್ರಕಟಿಸಿರುವ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ಅಭ್ಯರ್ಥಿಗಳ ಆಯ್ಕೆಪಟ್ಟಿ ತಯಾರಿಸಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25 ಅಕ್ಟೋಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23 ನವೆಂಬರ್ 2021
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 23 ನವೆಂಬರ್ 2021

 

Apply Online 
Notification PDF 
error: Content is protected !!