ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

KSRTC ನೇಮಕಾತಿ ಅಧಿಸೂಚನೆ 2022 : KKRTC Recruitment 2022

 

KKRTC Recruitment 2022 : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ದರ್ಜೆ-3 ಮೇಲ್ವಿಚಾರಕೇತರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕರ್ನಾಟಕ ರಸ್ತೆ ಸಾರಿಗೆ ನಿಗಮ
ಹುದ್ದೆಗಳ ಹೆಸರು:ಕುಶಲಕರ್ಮಿ (ಆಟೋ ಮೆಕ್ಯಾನಿಕ್, ಆಟೋ ಬಾಡಿ ಬಿಲ್ಡರ್, ಆಟೋ ವೆಲ್ಡರ್, ಆಟೋ ಪೇಂಟರ್, ಆಟೋ ಎಲೆಕ್ಟ್ರಿಷಿಯನ್), ತಾಂತ್ರಿಕ ಸಹಾಯಕ, ಸಹಾಯಕ ಸಂಚಾರ ನಿರೀಕ್ಷಕ, ಕ.ರಾ.ಸಾ. ಪೇದೆ, ಸಹಾಯಕ ಲೆಕ್ಕಿಗ
ಒಟ್ಟು ಹುದ್ದೆಗಳು 36
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ಹುದ್ದೆಗಳ ವಿವರ 
ಕುಶಲಕರ್ಮಿ 19

ವೇತನ ಶ್ರೇಣಿ: ರೂ.13970-20740

ತಾಂತ್ರಿಕ ಸಹಾಯಕ 3
ವೇತನ ಶ್ರೇಣಿ: ರೂ.11640-15700

ಸಹಾಯಕ ಸಂಚಾರ ನಿರೀಕ್ಷಕ 6
ವೇತನ ಶ್ರೇಣಿ: ರೂ.13970-20740

ಕ.ರಾ.ಸಾ. ಪೇದೆ 5+2
ವೇತನ ಶ್ರೇಣಿ: ರೂ.11640-15700

ಸಹಾಯಕ ಲೆಕ್ಕಿಗ 1
ವೇತನ ಶ್ರೇಣಿ: ರೂ.14970-26670

ವಿದ್ಯಾರ್ಹತೆ:
ಕುಶಲಕರ್ಮಿ (ಆಟೋ ಮೆಕ್ಯಾನಿಕ್, ಆಟೋ ಬಾಡಿ ಬಿಲ್ಡರ್, ಆಟೋ ವೆಲ್ಡರ್, ಆಟೋ ಪೇಂಟರ್) –  ಹುದ್ದೆಗಳಿಗೆ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಮೆಕ್ಯಾನಿಕಲ್/ ಆಟೋಮೊಬೈಲ್/ ವೆಲ್ಡಿಂಗ್ ಮತ್ತು ಶೀಟ್ ಮೆಟಲ್ ಟೆಕ್ನಾಲಜಿಯಲ್ಲಿ 3 ವರ್ಷದ ಇಂಜಿನಿಯರಿಂಗ್ ಡಿಪ್ಲೋಮಾ ಪಡೆದಿರಬೇಕು. ಚಾಲ್ತಿಯಲ್ಲಿರುವ ಭಾರಿ ಪ್ರಯಾಣಿಕರ ವಾಹನ ಚಾಲನಾ ಪರವಾನಿಗೆ
ಹೊಂದಿರಬೇಕು ಅಥವಾ ಪರೀಕ್ಷಾರ್ಥ ಅವಧಿ ಮುಗಿಯುವುದರೊಳಗೆ ಹೊಂದತಕ್ಕದ್ದು.

ಕುಶಲಕರ್ಮಿ (ಆಟೋ ಎಲೆಕ್ಟ್ರಿಷಿಯನ್) – ಹುದ್ದೆಗಳಿಗೆ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಎಲೆಕ್ಟ್ರಿಕಲ್/ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್/ ಮೆಕ್ಯಾಟ್ರಾನಿಕ್ಸ್ ಇಂಜಿನಿಯರಿಂಗ್/ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ನಲ್ಲಿ 3 ವರ್ಷಗಳ ಇಂಜಿನಿಯರಿಂಗ್ ಡಿಪ್ಲೋಮಾ ಪಡೆದಿರಬೇಕು. ಚಾಲ್ತಿಯಲ್ಲಿರುವ ಭಾರಿ ವಾಹನ ಚಾಲನಾ ಪರವಾನಿಗೆ ಹೊಂದಿರಬೇಕು ಅಥವಾ ಪರೀಕ್ಷಾರ್ಥ ಅವಧಿ ಮುಗಿಯುವುದರೊಳಗೆ ಹೊಂದತಕ್ಕದ್ದು.

ತಾಂತ್ರಿಕ ಸಹಾಯಕ – ಹುದ್ದೆಗಳಿಗೆ ಅಭ್ಯರ್ಥಿಗಳು ಪ್ರೌಢ ಶಿಕ್ಷಣ ಮಂಡಳಿಯಿಂದ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ನಂತರ ತಾಂತ್ರಿಕ ಮಂಡಳಿ ಅಥವಾ ಸರ್ಕಾರದಿಂದ ಅಂಗೀಕೃತವಾದ ಸಂಸ್ಥೆಯಲ್ಲಿ ಐ.ಟಿ.ಸಿ/ ಐ.ಟಿ.ಐ/ ಎನ್.ಎ.ಸಿ.ಯಲ್ಲಿ ಮೆಕ್ಯಾನಿಕ್ (ಮೋಟಾರ್ ವೆಹಿಕಲ್) ಹಾಗೂ ಇನ್ನೀತರ ವೃತ್ತಿಗಳಲ್ಲಿ ಉತ್ತೀರ್ಣರಾಗಿರಬೇಕು. ಪರೀಕ್ಷಾರ್ಥ ಸೇವೆ ಪೂರ್ಣಗೊಳ್ಳುವುದರೊಳಗೆ ಲಘು ಮೋಟಾರು ವಾಹನ ಚಾಲನಾ ಪರವಾನಿಗೆಯನ್ನು ಹೊಂದತಕ್ಕದ್ದು.

ಸಹಾಯಕ ಸಂಚಾರ ನಿರೀಕ್ಷಕ –  ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ ಪೂರ್ವ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು.

ಕ.ರಾ.ಸಾ. ಪೇದೆ – ಹುದ್ದೆಗಳಿಗೆ ಅಭ್ಯರ್ಥಿಗಳು ಪಿಯುಸಿ ಉತ್ತೀರ್ಣರಾಗಿರಬೇಕು ಅಥವಾ ಮಾಜಿ ಸೈನಿಕರಾಗಿದ್ದು, 2ನೇ ದರ್ಜೆ ಆರ್ಮಿ ಸರ್ಟಿಫಿಕೇಟ್ ಅಥವಾ ನೌಕಾದಳ/ ವಾಯುದಳದಲ್ಲಿ ತತ್ಸಮಾನ ದರ್ಜೆಯ ಸರ್ಟಿಫಿಕೇಟ್ ಹೊಂದಿರಬೇಕು.

ಸಹಾಯಕ ಲೆಕ್ಕಿಗ – ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಮೂರು ವರ್ಷಗಳ ವಾಣಿಜ್ಯ ಪದವಿ ಹೊಂದಿರಬೇಕು. ಗಣಕಯಂತ್ರ ಜ್ಞಾನ ಹೊಂದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
ಅಭ್ಯರ್ಥಿಗಳು ರೂ. 300 ಅರ್ಜಿ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಆಗಸ್ಟ್ 26, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 18, 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ -1ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ – 2ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

 

close button