ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 28 ಮೇ 2021 ರೊಳಗಾಗಿ ಆನ್ ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ :
– ಸಹಾಯಕ ವ್ಯವಸ್ಥಾಪಕರು
– ತಾಂತ್ರಿಕ ಅಧಿಕಾರಿ (ಡಿ.ಟಿ)
– ತಾಂತ್ರಿಕ ಅಧಿಕಾರಿ (ಪರಿಸರ)
– ತಾಂತ್ರಿಕ ಅಧಿಕಾರಿ (ಇಂಜಿನಿಯರಿಂಗ್)
– ವಿಸ್ತರಣಾಧಿಕಾರಿ ದರ್ಜೆ-3
– ಡೈರಿ ಸೂಪರ್ವೈಸರ್ ದರ್ಜೆ-2
– ಆಡಳಿತ ಸಹಾಯಕರು ದರ್ಜೆ 2
– ಮಾರುಕಟ್ಟೆ ಸಹಾಯಕರು ದರ್ಜೆ 2
– ಕೆಮಿಸ್ಟ್ ದರ್ಜೆ 2
– ಲೆಕ್ಕ ಸಹಾಯಕರು ದರ್ಜೆ 2
– ಕಿರಿಯ ತಾಂತ್ರಿಕರು (ಎಲೆಕ್ಟ್ರಿಷಿಯನ್, ಎಂ.ಆರ್.ಎ.ಸಿ, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಪಿಟ್ಟರ್, ವೆಲ್ಡರ್, ಬಾಯ್ಲರ್)
ಒಟ್ಟು ಹುದ್ದೆಗಳು: 76
SSLC ಪಾಸಾದವರಿಗೆ ರಾಜ್ಯದಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ 2021
ಉದ್ಯೋಗ ಸ್ಥಳ: ದಕ್ಷಿಣ ಕನ್ನಡ (ಮಂಗಳೂರು)
ವಿದ್ಯಾರ್ಹತೆ:
ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಈ ಕುರಿತು ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷಗಳ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಹಾಗೂ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳ ವರೆಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 4000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಅಹ್ವಾನ
ಅರ್ಜಿ ಶುಲ್ಕ:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ₹500/- ಶುಲ್ಕ ಹಾಗೂ ಇತರೆ ಅಭ್ಯರ್ಥಿಗಳಿಗೆ ₹800 ರೂಪಾಯಿಗಳ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಿ 1 ಅನುಪಾತ 5 (1:5) ರಂತೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮೌಖಿಕ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು: 28 ಎಪ್ರಿಲ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಗಳು: 28 ಮೇ 2021