ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ । Village Accountant Recruitment 2022

ಕೊಡಗು ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳ ಭರ್ತಿ

Kodagu Village Accountant Recruitment 2022 : ಕೊಡಗು ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

 

ಇಲಾಖೆ ಹೆಸರು:ಕಂದಾಯ ಇಲಾಖೆ 
ಹುದ್ದೆಗಳ ಹೆಸರು:ಗ್ರಾಮಲೆಕ್ಕಿಗರು
ಒಟ್ಟು ಹುದ್ದೆಗಳು 35
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

 

ವಿದ್ಯಾರ್ಹತೆ:
ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ನಡೆಸುವ ದ್ವಿತೀಯ ಪಿ.ಯು.ಸಿ. ಪರೀಕ್ಷೆ ಅಥವಾ ಸೆಂಟ್ರಲ್ ಬೋರ್ಡ್ ಆಪ್ ಸೆಕೆಂಡರಿ ಎಜುಕೇಷನ್ ಅಥವಾ ಐ.ಸಿ.ಎಸ್.ಇ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಇತರೆ ಯಾವುದೇ ತತ್ಸಮಾನ (JOC) ವಿದ್ಯಾರ್ಹತೆ ಅಥವಾ ತತ್ಸಮಾನ ಅಲ್ಲದೆ ಯಾವುದೇ ವಿದ್ಯಾರ್ಹತೆ ಪರಿಗಣಿಸಲಾಗುವುದಿಲ್ಲ.

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ಪೂರೈಸಿರಬೇಕು.
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ.
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ,

 

 

ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಪ.ಜಾತಿ/ಪ.ಪಂ/ಪ್ರ1/ಮಹಿಳಾ ಅಭ್ಯರ್ಥಿಗಳು ರೂ. 200
ಇತರೆ ಅಭ್ಯರ್ಥಿಗಳು ರೂ. 400
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಇಲಾಖೆಯ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.)

ಆಯ್ಕೆ ವಿಧಾನ 
ದ್ವಿತೀಯ ಪಿ.ಯು.ಸಿ. ಪರೀಕ್ಷೆ ಅಥವಾ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುವುದು.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಏಪ್ರಿಲ್ 19, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 19, 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

 

 

close button