ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

10ನೇ ಪಾಸ್ ಆದ್ರೆ ಸಾಕು ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಅಹ್ವಾನ

ಕೋಲಾರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ 

Kolar District Court Recruitment 2022: ಕೋಲಾರ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಕೋಲಾರ ಜಿಲ್ಲಾ ನ್ಯಾಯಾಲಯ
ಹುದ್ದೆಗಳ ಹೆಸರು:ಶೀಘ್ರಲಿಪಿಗಾರರು ಗ್ರೇಡ್ 3 ಹಾಗೂ ಸೇವಕರು
ಒಟ್ಟು ಹುದ್ದೆಗಳು 32
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ಶೀಘ್ರಲಿಪಿಗಾರರು ಗ್ರೇಡ್ 3  – 10 ಹುದ್ದೆಗಳು 
ಸೇವಕರು – 22 ಹುದ್ದೆಗಳು 

ವಿದ್ಯಾರ್ಹತೆ:
ಶೀಘ್ರಲಿಪಿಗಾರರು  ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತಾಂತ್ರಿಕ ಶಿಕ್ಷಣ ಮಂಡಳಿಯ ಕಮರ್ಷಿಯಲ್ ಪ್ರಾಕ್ಟೀಸ್ 3 ವರ್ಷಗಳ ಡಿಪ್ಲೋಮಾ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಜೊತೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಎರಡೂ ಭಾಷೆಯಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಅಥವಾ ಡಿಪ್ಲೋಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಮಾಸಿಕ ವೇತನ: ರೂ.27650/-ರೂ.52650/-

ಜವಾನ  ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕನ್ನಡ ಓದಲು, ಬರೆಯಲು ತಿಳಿದಿರಬೇಕು.
ಮಾಸಿಕ ವೇತನ: ರೂ.17000/- ರೂ.28950/-

ವಯೋಮಿತಿ:
 ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 200
ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು ರೂ. 100

(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.)

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಜೂನ್ 27, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 26, 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ಶೀಘ್ರಲಿಪಿಗಾರರು ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಸೇವಕರು ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 
close button