ಕೊಂಕಣ ರೈಲ್ವೆ ನಿಗಮ ನಿಯಮಿತ (KRCL) ನಲ್ಲಿ ಖಾಲಿ ಇರುವ 2021ನೇ ಸಾಲಿಗೆ 139 ಪದವೀಧರ ಮತ್ತು ತಂತ್ರಜ್ಞ ತರಬೇತಿ ಅಪ್ರೆಂಟಿಸ್‌ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ22-10-2021 ರಿಂದ 22-11-2021 ರ ಸಂಜೆ 05:00 ಗಂಟೆಯೊಳಗೆ ಅರ್ಜಿ ಸಲ್ಲಿಸಲು ಸೂಚಿಸಿದೆ.
ಒಟ್ಟು ಹುದ್ದೆಗಳು: 139
ಉದ್ಯೋಗ ಸ್ಥಳ: ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದಲ್ಲಿ
ವಿದ್ಯಾರ್ಹತೆ:
ಪದವೀಧರ ಮತ್ತು ತಂತ್ರಜ್ಞ ತರಬೇತಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್, ಇಲೆಕ್ಟ್ರಿಕಲ್, ಇಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್ಸ್ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ ಬಿ.ಇ/ಬಿ.ಟೆಕ್/ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ವಯೋಮಿತಿ:
ಪದವೀಧರ ಮತ್ತು ತಂತ್ರಜ್ಞ ತರಬೇತಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 01-10-2021 ರ ಅನ್ವಯ ಈ ಕೆಳಗಿನಂತೆ ವಯೋಮಿತಿಯನ್ನು ಹೊಂದಿರಬೇಕು.
General ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿರಬೇಕು.
OBC ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 28 ವರ್ಷಗಳ ವಯೋಮಿತಿಯೊಳಗಿರಬೇಕು.
SC/ST ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 30 ವರ್ಷಗಳ ವಯೋಮಿತಿಯೊಳಗಿರಬೇಕು.
ವೇತನ ಶ್ರೇಣಿ:
ಪದವೀಧರ ಮತ್ತು ತಂತ್ರಜ್ಞ ತರಬೇತಿ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ 3,542/-ರೂ ಗಳಿಂದ 4,984/-ರೂಗಳ ವರೆಗೆ ಸ್ಟೈಫೆಂಡ್ ಅನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಪದವೀಧರ ಮತ್ತು ತಂತ್ರಜ್ಞ ತರಬೇತಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.
General ಅಭ್ಯರ್ಥಿಗಳಿಗೆ 100/-ರೂಗಳು
SC/ ST/ Female/ Disabled/ Financially Disadvantaged ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಪದವೀಧರ ಮತ್ತು ತಂತ್ರಜ್ಞ ತರಬೇತಿ ಅಪ್ರೆಂಟಿಸ್ ಹುದ್ದೆಗಳಿಗೆ ಬಂದಂತ ಅರ್ಜಿಯನ್ನು Shortlist ಮಾಡಲಾಗುವುದು. ನಂತರ Written Examination, Group discussion, Physical Examination ಮತ್ತು Direct interview ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22 ಅಕ್ಟೋಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22 ನವೆಂಬರ್ 2021
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 22 ನವೆಂಬರ್ 2021
Website |
Notification |