ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

KPCL ನೇರ ನೇಮಕಾತಿ 2025 – ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ

ಹೊಸ ನೇಮಕಾತಿ ಅಧಿಸೂಚನೆ 2025

KPCL Recruitment 2025 – ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPCL) ನೇಮಕಾತಿ ಅಧಿಸೂಚನೆಯ ಮೂಲಕ ಸಹಾಯಕ ಕಾನೂನು ಅಧಿಕಾರಿ (Assistant Legal Officer) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ  ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPCL) ನೇಮಕಾತಿ ಅಧಿಸೂಚನೆಯ ಮೂಲಕ ಸಹಾಯಕ ಕಾನೂನು ಅಧಿಕಾರಿ (Assistant Legal Officer) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರಗಳು

– ಇಲಾಖೆ ಹೆಸರು -ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPCL)
– ಹುದ್ದೆಗಳ ಹೆಸರು – ಸಹಾಯಕ ಕಾನೂನು ಅಧಿಕಾರಿ
– ಒಟ್ಟು ಹುದ್ದೆಗಳು -02
– ಹುದ್ದೆಯ ಅವಧಿ:
ಗುತ್ತಿಗೆ ಆಧಾರದಲ್ಲಿ, ಅಗತ್ಯವಿದ್ದರೆ ವಿಸ್ತರಣೆ ಸಾಧ್ಯ
– ಕೆಲಸದ ಸ್ಥಳ: ಬೆಂಗಳೂರು ಅಥವಾ ನಿಗದಿತ ಯೋಜನೆಗಳು (KPCL ಯೋಜನೆಗಳ ಆಧಾರದಲ್ಲಿ)

ವಿದ್ಯಾರ್ಹತೆ 
– ಅಂಗೀಕೃತ ವಿಶ್ವವಿದ್ಯಾಲಯದಿಂದ ಕಾನೂನು ಪದವಿ (Degree in Law) ಹೊಂದಿರಬೇಕು
– ಕನಿಷ್ಠ 5 ವರ್ಷಗಳ ವ್ಯಾವಹಾರಿಕ ಅನುಭವ ಹೊಂದಿರಬೇಕು
– ಕನ್ನಡ ಭಾಷೆಯ ಬೋಧನೆ, ಓದು ಹಾಗೂ ಬರವಣಿಗೆಗೆ ಯೋಗ್ಯತೆ ಇರಬೇಕು
– ಸರ್ಕಾರಿ/ಖಾಸಗಿ ಸಂಸ್ಥೆಗಳಲ್ಲಿ ಅಥವಾ ನ್ಯಾಯಾಂಗ ಇಲಾಖೆಯಲ್ಲಿ ಕಾನೂನು ಸಲಹೆಗಾರರಾಗಿ ಕೆಲಸದ ಅನುಭವ ಇರುವವರಿಗೆ ಆದ್ಯತೆ

ವಯೋಮಿತಿ
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸು: 40 ವರ್ಷ ವಯಸ್ಸು ನಿಗದಿಪಡಿಸಲಾಗಿದೆ.

ವೇತನಶ್ರೇಣಿ
– ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ ರೂ. 65,000/- ಮಾಸಿಕ ಸಂಭಾವನೆ ನೀಡಲಾಗುತ್ತದೆ (ಆದಾಯ ತೆರಿಗೆ ನಿಯಮಗಳ ಪ್ರಕಾರ ಕಡಿತಗೊಳ್ಳುತ್ತದೆ).
– ಪ್ರತಿದಿನದ ಕೆಲಸಕ್ಕೆ ಸಂಬಳವನ್ನು ನಿಗದಿತ ಪ್ರಮಾಣದಲ್ಲಿ ಪಾವತಿಸಲಾಗುತ್ತದೆ.
– ನೇಮಕಗೊಂಡ ಅಭ್ಯರ್ಥಿಗಳು ತಮ್ಮ ಕರ್ತವ್ಯ ನಿರ್ವಹಿಸಲು ಅಗತ್ಯವಿರುವ ಸಂದರ್ಭಗಳಲ್ಲಿ ಬೇರೆಯವರು ಅನುಮೋದಿಸಿದ ಪ್ರಯಾಣಗಳಿಗೆ ಹೋಗಬೇಕಾದಲ್ಲಿ, ಅಧಿಕಾರಿಗಳ ಅನುಮೋದನೆಯ ಮೇರೆಗೆ **TA/DA (ಪ್ರಯಾಣ ಮತ್ತು ಭತ್ಯೆ)**ಗಳನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ 
ಅಭ್ಯರ್ಥಿಗಳನ್ನು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ ವಿಧಾನ
ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು KPCL ಅಧಿಕೃತ ವೆಬ್‌ಸೈಟ್ https://kpcl.karnataka.gov.in ನಲ್ಲಿ ಲಭ್ಯವಿರುವ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಬೇಕು.
ಅರ್ಜಿಯೊಂದಿಗೆ ಅಗತ್ಯದ ವಿದ್ಯಾರ್ಹತೆ, ಅನುಭವ ಹಾಗೂ ಸಾಥಿ ದಾಖಲೆಗಳ ಸ್ವಪ್ರಮಾಣಿತ ಪ್ರತಿಗಳನ್ನು ಜೊತೆಗೆ ಸೇರಿಸಿ.

ಅರ್ಜಿಗೆ ಲಗತ್ತಿಸಬೇಕಾದ ದಾಖಲೆಗಳು
– ಅಭ್ಯರ್ಥಿಗಳು ತಮ್ಮ ಅರ್ಜಿಯೊಂದಿಗೆ ಕೆಳಕಂಡ ದಾಖಲೆಗಳ ಸ್ವಪ್ರಮಾಣಿತ (Self-attested) ಪ್ರತಿಗಳನ್ನು ಕಡ್ಡಾಯವಾಗಿ ಲಗತ್ತಿಸಬೇಕು:
– ಜನ್ಮ ಪ್ರಮಾಣಪತ್ರ/ಎಸ್‌ಎಸ್‌ಎಲ್‌ಸಿ ಮಾರ್ಕ್‌ಶೀಟ್ – ಜನ್ಮದಿನಾಂಕದ ಸಾಬೀತಿಗಾಗಿ
– ಸ್ಥಳೀಯತಾ ಪ್ರಮಾಣಪತ್ರ (Domicile Certificate) – ಕರ್ನಾಟಕ ರಾಜ್ಯದ ನಿವಾಸಿಯು ಎಂಬುದನ್ನು ದೃಢೀಕರಿಸಲು
– ಅನುಭವ ಪ್ರಮಾಣಪತ್ರ – ಕನಿಷ್ಠ 5 ವರ್ಷಗಳ ಕಾನೂನು ಅನುಭವ ಹೊಂದಿರುವುದನ್ನು ತೋರಿಸುವ ದಾಖಲೆಗಳು (ಸರಕಾರ/ಖಾಸಗಿ ಸಂಸ್ಥೆ ಅಥವಾ ನ್ಯಾಯಾಂಗದ ಅನುಭವ)
– ಶೈಕ್ಷಣಿಕ ಅರ್ಹತೆ – ಕಾನೂನು ಪದವಿ ಅಥವಾ ಕನ್ವೊಕೇಶನ್ ಪ್ರಮಾಣಪತ್ರ, ಪಠ್ಯ ಕ್ರಮ / ಸಿಲಿಬಸ್ ಇದ್ದರೆ ಸೇರಿಸಬಹುದು

ಅರ್ಜಿಯನ್ನು ಇಮೇಲ್ ಮೂಲಕ ಕಳುಹಿಸಬೇಕು:
kpclcontractappt@gmail.com

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-05-2025 ಸಂಜೆ 5:30 ಗಂಟೆ
ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಇತರ ಯಾವುದೇ ಮಾಧ್ಯಮಗಳಲ್ಲಿ ಸಲ್ಲಿಸಲಾದ ಅರ್ಜಿಗಳನ್ನು ಸ್ವೀಕರಿಸಲಾಗದು.

ಪ್ರಮುಖ ಲಿಂಕುಗಳು

ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
ನಮ್ಮ ಯೂಟ್ಯೂಬ್ ಚಾನೆಲ್ ನೋಡಿ: ಇಲ್ಲಿ ಕ್ಲಿಕ್ ಮಾಡಿ

close button