WhatsApp Telegram Group

ಪೊಲೀಸ್ ಇಲಾಖೆಯಲ್ಲಿ ಬೃಹತ್ ನೇಮಕಾತಿ 2021 – 3533 ಕಾನ್ಸ್ ಟೇಬಲ್ ಹುದ್ದೆಗಳ ಭರ್ತಿ IA

ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಕನಸು ಹೊಂದಿರುವವರಿಗೆ ಸುವರ್ಣಾವಕಾಶ ಒದಗಿಬಂದಿದ್ದು, ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 3,533 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.
ಅರ್ಜಿ ಸಲ್ಲಿಕೆ ಪ್ರಕ್ರಿಯೆಯೂ ದಿನಾಂಕ 25 ಮೇ 2021 ರ ಬೆಳಿಗ್ಗೆ ಹತ್ತು ಗಂಟೆಯಿಂದ ಆರಂಭಗೊಳ್ಳಲಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25 ಜೂನ್ 2021 ಆಗಿರುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ.

ಒಟ್ಟು ಹುದ್ದೆಗಳ ಸಂಖ್ಯೆ: 3533
ಉದ್ಯೋಗ ಸ್ಥಳ: ಕರ್ನಾಟಕ

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆಯಿಂದ ಪಡೆದಿರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 25 ಜೂನ್ 2021ಕ್ಕೆ ಅನ್ವಯಿಸುವಂತೆ ಕನಿಷ್ಟ 19 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿಯು

In Article ad

ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ 400 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ 200 ಅರ್ಜಿಯ ಶುಲ್ಕವನ್ನು ನಿಗದಿಪಡಿಸಲಾಗಿದೆ.
ವಯೋಸಡಿಲಿಕೆ
ಸಾಮಾನ್ಯ ಅಭ್ಯರ್ಥಿಗಳಿಗೆ 25 ವರ್ಷ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ 27 ವರ್ಷ
ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷಗಳವರೆಗೆ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ವೇತನ ಶ್ರೇಣಿ:
₹23500-550-24600-600-27000-650-29600-750-32600-850-36000-950-39800-1100-46400-1250-47650.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳನ್ನು ಮೊದಲು ಲಿಖಿತ ಪರೀಕ್ಷೆ ನಡೆಸಿ ನಂತರ 1:5 ರ ಅರ್ಹತೆ ಆಧಾರದ ಮೇಲೆ ದೈಹಿಕ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು. ಈ ಕುರಿತು ವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಬಹುದು

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25 ಮೇ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25 ಜೂನ್ 2021

In Article ad
Website
Notification

 

ಅಂಗನವಾಡಿ ನೇಮಕಾತಿ 2021

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಾಮರಾಜನಗರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, 

ಉದ್ಯೋಗ ಸ್ಥಳ:  ಚಾಮರಾಜನಗರ ಜಿಲ್ಲೆ 
ಒಟ್ಟು ಹುದ್ದೆಗಳು: 223
ಅಂಗನವಾಡಿ ಕಾರ್ಯಕರ್ತೆ – 70
ಅಂಗನವಾಡಿ ಸಹಾಯಕಿ – 153

In Article ad

ವಿದ್ಯಾರ್ಹತೆ
ಅಂಗನವಾಡಿ ಸಹಾಯಕಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ.( 9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)
ಅಂಗನವಾಡಿ ಕಾರ್ಯಕರ್ತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.

 ವಯೋಮಿತಿ: ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ವಿಧಾನ: ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿರುವ / ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3 ವ‍ರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ –26 ಏಪ್ರಿಲ್  2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 25 ಮೇ 2021

In Article ad

 

ವೆಬ್ಸೈಟ್
ನೋಟಿಫಿಕೇಶನ್

WCD Davanagere Recruitment 2021 – Apply Online for 80 Anganwadi Worker & Helper Posts

ಜಿಲ್ಲಾವಾರು ಉದ್ಯೋಗ ಮಾಹಿತಿ

close button