KPSC ಇಂದ ಗ್ರೂಪ್‌ ಬಿ ಹುದ್ದೆಗಳ ನೇಮಕಕ್ಕೆ ಅರ್ಜಿ ಅಹ್ವಾನ : KPSC Group B Post Recruitment 2022

ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ ಅಧಿಸೂಚನೆ 2022

KPSC Group B Post Recruitment 2022: ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್‌, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

 

ಇಲಾಖೆ ಹೆಸರು: ಕರ್ನಾಟಕ ಲೋಕಸೇವಾ ಆಯೋಗ 
ಹುದ್ದೆಗಳ ಹೆಸರು: ವಿವಿಧ ಗ್ರೂಪ್ ಬಿ ಹುದ್ದೆಗಳು 
ಒಟ್ಟು ಹುದ್ದೆಗಳು  33
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

ವಿದ್ಯಾರ್ಹತೆ:

ಹುದ್ದೆ: ಮುದ್ರಣ, ಲೇಖನ ಸಾಮಗ್ರಿ ಮತ್ತು ಪ್ರಕಟಣೆಗಳ ಇಲಾಖೆ- ಸಹಾಯಕ ನಿರ್ದೇಶಕರು
ನಿಗಧಿತ ವಿದ್ಯಾರ್ಹತೆ : ಮೆಕ್ಯಾನಿಕಲ್ / ಇಲೆಕ್ಟ್ರಾನಿಕ್ಸ್‌ / ಪ್ರಿಂಟಿಂಗ್ ಟೆಕ್ನಾಲಜಿ / ಕಂಪ್ಯೂಟರ್ ಸೈನ್ಸ್‌ ಬಿಇ ಅಥವಾ ಭೌತಶಾಸ್ತ್ರ / ರಸಾಯನ ಶಾಸ್ತ್ರ ಎಂಎಸ್ಸಿ ಪಾಸ್

ಹುದ್ದೆ : ಭಾಷಾಂತರ ನಿರ್ದೇಶನಾಲಯದಲ್ಲಿನ ಭಾಷಾಂತರಕಾರರು
ನಿಗಧಿತ ವಿದ್ಯಾರ್ಹತೆ: ಎಂಎ ಕನ್ನಡ ಪಾಸ್ ಹಾಗೂ ಡಿಗ್ರಿಯಲ್ಲಿ ಇಂಗ್ಲಿಷ್‌ ಭಾಷೆಯನ್ನು ಒಂದು ಭಾಷಾ ಸಬ್ಜೆಕ್ಟ್‌ ಆಗಿ ಓದಿರಬೇಕು. ಅಥವಾ ಇಂಗ್ಲಿಷ್ ಎಂಎ ಹಾಗೂ ಡಿಗ್ರಿಯಲ್ಲಿ ಕನ್ನಡ ಭಾಷಾ ವಿಷಯ ಓದಿರಬೇಕು.

ಹುದ್ದೆ: ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿ ನಗರ ಯೋಜಕರು
ನಿಗಧಿತ ವಿದ್ಯಾರ್ಹತೆ: ಸಿವಿಲ್ ಇಂಜಿನಿಯರಿಂಗ್ ಅಥವಾ ಆರ್ಕಿಟೆಕ್ಚರ್ ಅನ್ನು ಅಂಗೀಕೃತ ವಿವಿಯಿಂದ ಪಾಸ್ ಮಾಡಿರಬೇಕು.

 

 

ವಯೋಮಿತಿ:
 ಕನಿಷ್ಠ 18 ವರ್ಷ ಆಗಿರಬೇಕು.
ಗರಿಷ್ಠ 35 ವರ್ಷ ವಯೋಮಿತಿ ಮೀರಿರಬಾರದು.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.
ಎಸ್‌ಸಿ / ಎಸ್‌ಟಿ / ಪ್ರ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ.

ವೇತನಶ್ರೇಣಿ:
ಮುದ್ರಣ, ಲೇಖನ ಸಾಮಗ್ರಿ ಮತ್ತು ಪ್ರಕಟಣೆಗಳ ಇಲಾಖೆ- ಸಹಾಯಕ ನಿರ್ದೇಶಕರು: Rs.40900-78200.
ಭಾಷಾಂತರ ನಿರ್ದೇಶನಾಲಯದಲ್ಲಿನ ಭಾಷಾಂತರಕಾರರು: Rs.40900-78200.
ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿ ನಗರ ಯೋಜಕರು: Rs.43100-83900.

ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ರೂ.600.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.300.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50.
ಎಸ್‌ಸಿ / ಎಸ್‌ಟಿ / ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  29-03-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  28-04-2022
ಅಪ್ಲಿಕೇಶನ್ ಶುಲ್ಕವನ್ನು ಪಾವತಿಸಲು ಕೊನೆ ದಿನಾಂಕ 29-04-2022
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

 

error: Content is protected !!