KPSC ಹೊಸ ನೇಮಕಾತಿ ಅಧಿಸೂಚನೆ 2022 ವಿವಿಧ ಗ್ರೇಡ್ ಎ ಹುದ್ದೆಗಳು

KPSC RDWSD Recruitment 2022 : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಮತ್ತು ಹೈದೆರಾಬಾದ್ ಕರ್ನಾಟಕ ವೃಂದದ ಸಹಾಯಕ ಕಾರ್ಯಪಾಲಕ ಅಭಿಯಂತರರು ಗ್ರೇಡ್ 1 ಹುದ್ದೆಗಳಿಗೆ ಇದೀಗ ಕೆಪಿಎಸ್‌ಸಿ ಅಧಿಸೂಚನೆ ಹೊರಡಿಸಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕರ್ನಾಟಕ ಲೋಕಸೇವಾ ಆಯೋಗ
ಹುದ್ದೆಗಳ ಹೆಸರು: ಸಹಾಯಕ ಕಾರ್ಯಪಾಲಕ ಅಭಿಯಂತರರು ಗ್ರೇಡ್ 1
ಒಟ್ಟು ಹುದ್ದೆಗಳು  18
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

ವಿದ್ಯಾರ್ಹತೆ:
ಕರ್ನಾಟಕ ಸರ್ಕಾರ ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಸಿವಿಲ್ ಇಂಜಿನಿಯರಿಂಗ್ ಅಥವಾ ಪರಿಸರ ಇಂಜಿನಿಯರಿಂಗ್ ಅಥವಾ ಕನ್‌ಸ್ಟ್ರಕ್ಷನ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್‌ ವಿಭಾಗದಲ್ಲಿ ಪದವಿ ಪಡೆದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಕೆಗೆ ಕನಿಷ್ಠ 18 ವರ್ಷ ಆಗಿರಬೇಕು.
ಗರಿಷ್ಠ 35 ವರ್ಷ ವಯೋಮಿತಿ ಮೀರಿರಬಾರದು.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ವಯೋಮಿತಿ.
ಎಸ್‌ಸಿ / ಎಸ್‌ಟಿ / ಪ್ರ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ.

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ಶ್ರೇಣಿ : ರೂ.52650/- ರೂ.97100/-

ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ  ಅಭ್ಯರ್ಥಿಗಳಿಗೆ ರೂ.600.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.300.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50.
ಎಸ್‌ಸಿ / ಎಸ್‌ಟಿ / ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ರೂ.35 ರ ಅರ್ಜಿ ಪ್ರಕ್ರಿಯೆ ಶುಲ್ಕವನ್ನು ಎಲ್ಲ ಅಭ್ಯರ್ಥಿಗಳು ಕಡ್ಡಾಯವಾಗಿ ಪಾವತಿಸಬೇಕು.

ನೇರ ನೇಮಕಾತಿ ವಿಧಾನ
ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ
ಯಾರೇ ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆಯದ ಹೊರತು ಆಯ್ಕೆಗೆ ಅರ್ಹರಲ್ಲ. ಈ ಪರೀಕ್ಷೆಯನ್ನು ಗರಿಷ್ಠ 150 ಅಂಕಗಳಿಗೆ ನಡೆಸಲಿದ್ದು, ಅಭ್ಯರ್ಥಿಯು ಈ ಪತ್ರಿಕೆಯಲ್ಲಿ ಅರ್ಹತೆ ಹೊಂದಲು ಕನಿಷ್ಠ 50 ಅಂಕಗಳನ್ನು ಪಡೆಯಬೇಕು.

ಈ ಪ್ರಶ್ನೆ ಪತ್ರಿಕೆಯನ್ನು ಎಸ್‌ಎಸ್‌ಎಲ್‌ಸಿ ಹಂತದಲ್ಲಿನ ಪ್ರಥಮ ಭಾಷೆ ಕನ್ನಡವನ್ನು ಮಾನದಂಡವನ್ನಾಗಿಕೊಂಡು ಸಿದ್ಧಪಡಿಸಲಾಗುವುದು.

ಸ್ಪರ್ಧಾತ್ಮಕ ಪರೀಕ್ಷೆ
ಸ್ಪರ್ಧಾತ್ಮಕ ಪರೀಕ್ಷೆಯು ತಲಾ 300 ಅಂಕಗಳಿಗೆ ಎರಡು ಲಿಖಿತ ಪ್ರಶ್ನೆ ಪತ್ರಿಕೆಗಳನ್ನು ಒಳಗೊಂಡಿದ್ದು, ವಸ್ತುನಿಷ್ಠ ಬಹು ಆಯ್ಕೆ ಮಾದರಿಯಲ್ಲಿ ಇರುತ್ತದೆ.

ಪರೀಕ್ಷಾ ವಿಧಾನ:
1 ಸಾಮಾನ್ಯ ಪತ್ರಿಕೆ (ಜನರಲ್ ಪೇಪರ್) 300 ಅಂಕಗಳು
ಕಾಲಾವಕಾಶ 01-30 ಗಂಟೆ
2 ನಿರ್ದಿಷ್ಟ ಪತ್ರಿಕೆ (ಸ್ಪೆಸಿಫಿಕ್ ಪೇಪರ್) 300 ಅಂಕಗಳು
ಕಾಲಾವಕಾಶ 2 ಗಂಟೆ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  17-09-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  17-10-2022
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ 18-10-2022
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ -1 ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ -2 ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!