ಕರ್ನಾಟಕ ಲೋಕ ಸೇವಾ ಆಯೋಗ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ
KPSC Recruitment 2022: ಕರ್ನಾಟಕ ಲೋಕ ಸೇವಾ ಆಯೋಗ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಆರ್ಧಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಸಹಾಯಕ ಸಾಂಖ್ಯಿಕ ಅಧಿಕಾರಿಗಳ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕರ್ನಾಟಕ ಲೋಕ ಸೇವಾ ಆಯೋಗ |
ಹುದ್ದೆಗಳ ಹೆಸರು: | ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅಧಿಸೂಚನೆ |
ಒಟ್ಟು ಹುದ್ದೆಗಳು | 5 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಗಣಿತಶಾಸ್ತ್ರ, ಶುದ್ಧ ಗಣಿತ, ಅಂಕಿಅಂಶ, ಅನ್ವಯಿಕ ಅಂಕಿಅಂಶಗಳು, ಅಂಕಿಅಂಶಗಳು/ಕ್ವಾಂಟಿಟೇಟಿವ್ ಟೆಕ್ನಿಕ್ಸ್‌ನೊಂದಿಗೆ ಅರ್ಥಶಾಸ್ತ್ರ, ಶುದ್ಧ ಅರ್ಥಶಾಸ್ತ್ರ, ಅನ್ವಯಿಕ ಅರ್ಥಶಾಸ್ತ್ರ, ಅನ್ವಯಿಕ ಅರ್ಥಶಾಸ್ತ್ರ, ಮಾನ್ಯತೆ ಪಡೆದ ಗಣಿತಶಾಸ್ತ್ರದ ಯಾವುದೇ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯುಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ಪ.ಜಾ, ಪ.ಪಂ ಮತ್ತು ಪ್ರವರ್ಗ 1ಎ ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಭ್ಯರ್ಥಿಗಳು: 03 ವರ್ಷಗಳು
ವಿಕಲಚೇತನ ವಿಧವೆ ಅಭ್ಯರ್ಥಿಗಳು: 10 ವರ್ಷಗಳು
ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.37900/- ರೂ.70850/-
ಅರ್ಜಿ ಶುಲ್ಕ:
ಪ.ಜಾ, ಪ.ಪಂ ಮತ್ತು ಪ್ರವರ್ಗ 1ಎ, ವಿಕಲಚೇತನ ಅಭ್ಯರ್ಥಿಗಳು: 35 ರೂ
ಮಾಜಿ ಸೈನಿಕ ಅಭ್ಯರ್ಥಿಗಳು: 85 ರೂ
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 335 ರೂ.
ಸಾಮಾನ್ಯ ಅಭ್ಯರ್ಥಿಗಳು: 635 ರೂ
ಆಯ್ಕೆ ವಿಧಾನ
ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 01 ಆಗಸ್ಟ್ 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 30 ಆಗಸ್ಟ್ 2022 |
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ | 31 ಆಗಸ್ಟ್ 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |