KPSC Recruitment 2022 – ಕರ್ನಾಟಕ ಲೋಕಸೇವಾ ಆಯೋಗವು ನಿನ್ನೆಯಷ್ಟೇ ಎರಡು ಹೊಸ ನೋಟಿಫಿಕೇಶನ್‌ಗಳನ್ನು ಬಿಡುಗಡೆ ಮಾಡಿತ್ತು. ಇದೀಗ ಮತ್ತೊಂದು ಅಧಿಸೂಚನೆ ಬಿಡುಗಡೆ ಮಾಡಿದೆ. ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಸಾಂಖ್ಯಿಕ ನಿರೀಕ್ಷಕರು ಹುದ್ದೆಗಳಿಗೆ ನೋಟಿಫಿಕೇಶನ್ ಪ್ರಕಟಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕರ್ನಾಟಕ ಲೋಕಸೇವಾ ಆಯೋಗ |
ಹುದ್ದೆಗಳ ಹೆಸರು: | ಸಾಂಖ್ಯಿಕ ನಿರೀಕ್ಷಕರು (ಗ್ರೂಪ್ ಸಿ) |
ಒಟ್ಟು ಹುದ್ದೆಗಳು | 105 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಕರ್ನಾಟಕ ಲೋಕಸೇವಾ ಆಯೋಗ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಗಣಿತ / ಕಂಪ್ಯೂಟರ್ ಸೈನ್ಸ್ / ಅರ್ಥಶಾಸ್ತ್ರ / ಸಂಖ್ಯಾಶಾಸ್ತ್ರ ಈ ನಾಲ್ಕರಲ್ಲಿ ಯಾವುದೇ ವಿಷಯದಲ್ಲಿ ಡಿಗ್ರಿ ಪಾಸ್ ಮಾಡಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು.
ಗರಿಷ್ಠ 35 ವರ್ಷ ವಯೋಮಿತಿ ಮೀರಿರಬಾರದು.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ವಯೋಮಿತಿ.
ಎಸ್‌ಸಿ / ಎಸ್‌ಟಿ / ಪ್ರ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ.
ವೇತನಶ್ರೇಣಿ:
ಕರ್ನಾಟಕ ಲೋಕಸೇವಾ ಆಯೋಗ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,650 ರಿಂದ ರೂ. 52,650 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ರೂ.600.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.300.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50.
ಎಸ್‌ಸಿ / ಎಸ್‌ಟಿ / ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ರೂ.35 ರ ಅರ್ಜಿ ಪ್ರಕ್ರಿಯೆ ಶುಲ್ಕವನ್ನು ಎಲ್ಲ ಅಭ್ಯರ್ಥಿಗಳು ಕಡ್ಡಾಯವಾಗಿ ಪಾವತಿಸಬೇಕು.
ಆಯ್ಕೆ ವಿಧಾನ:
ಕರ್ನಾಟಕ ಲೋಕಸೇವಾ ಆಯೋಗ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ನೇರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಸಲಾಗುತ್ತದೆ.
ಸ್ಪರ್ಧಾತ್ಮಕ ಪರೀಕ್ಷೆ ವಿಧಾನ
ಯಾರೇ ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆಯದ ಹೊರತು ಆಯ್ಕೆಗೆ ಅರ್ಹರಲ್ಲ. ಈ ಪರೀಕ್ಷೆಯನ್ನು ಗರಿಷ್ಠ 150 ಅಂಕಗಳಿಗೆ ನಡೆಸಲಿದ್ದು, ಅಭ್ಯರ್ಥಿಯು ಈ ಪತ್ರಿಕೆಯಲ್ಲಿ ಅರ್ಹತೆ ಹೊಂದಲು ಕನಿಷ್ಠ 50 ಅಂಕಗಳನ್ನು ಗಳಿಸಬೇಕು.
ತಲಾ 100 ಅಂಕಗಳಿಗೆ 2 ಲಿಖಿತ ಪ್ರಶ್ನೆ ಪತ್ರಿಕೆಗಳನ್ನು ನಡೆಸಲಿದ್ದು, ವಸ್ತುನಿಷ್ಠ ಬಹು ಆಯ್ಕೆ ಮಾದರಿಯ ಪತ್ರಿಕೆಗಳು ಇವು.
ಪ್ರತಿ ಪ್ರಶ್ನೆಯು ಋಣಾತ್ಮಕ ಅಂಕದ ಸ್ವರೂಪದ್ದಾಗಿದ್ದು, ಪ್ರತಿಯೊಂದು ತಪ್ಪಾದ ಉತ್ತರಕ್ಕೆ ಪ್ರಶ್ನೆಗಳಿಗೆ ಹಂಚಿಕೆ ಮಾಡಲಾದ ಅಂಕಗಳಲ್ಲಿ 1/4 ಭಾಗವನ್ನು ಕಳೆಯಲಾಗುತ್ತದೆ. ಪ್ರಶ್ನೆ ಪತ್ರಿಕೆ ವಿಷಯ, ಅಂಕಗಳು, ಪರೀಕ್ಷೆ ಸಮಯ ಈ ಕೆಳಗಿನಂತಿದೆ.
ಪತ್ರಿಕೆ – 1: ಸಾಮಾನ್ಯ ಪತ್ರಿಕೆ (100 ಅಂಕಗಳಿಗೆ ಪರೀಕ್ಷೆ)
ಪತ್ರಿಕೆ – 2: ನಿರ್ದಿಷ್ಟ ಪತ್ರಿಕೆ (100 ಅಂಕಗಳಿಗೆ ಪರೀಕ್ಷೆ)
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 19-10-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 17-11-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |