ಕರ್ನಾಟಕ ಲೋಕಸೇವಾ ಆಯೋಗದ ಹೊಸ ನೇಮಕಾತಿ ಅಧಿಸೂಚನೆ 2022
Water Resource Dept JE Recruitment 2022 – ಕರ್ನಾಟಕ ಲೋಕಸೇವಾ ಆಯೋಗವು ಇದೀಗ ಜಲ ಸಂಪನ್ಮೂಲ ಇಲಾಖೆಯಲ್ಲಿನ 169 ಹೈದೆರಾಬಾದ್ ಕರ್ನಾಟಕ ವೃಂದದಲ್ಲಿನ ಗ್ರೂಪ್ ಸಿ ಕಿರಿಯ ಇಂಜಿನಿಯರ್ (ಸಿವಿಲ್), (ಮೆಕ್ಯಾನಿಕಲ್) ಹುದ್ದೆಗಳ ನೇಮಕಾತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ. kpsc
ಇಲಾಖೆ ಹೆಸರು: | ಕರ್ನಾಟಕ ಲೋಕಸೇವಾ ಆಯೋಗ kpsc |
ಹುದ್ದೆಗಳ ಹೆಸರು: | ಕಿರಿಯ ಇಂಜಿನಿಯರ್ (ಗ್ರೂಪ್ ಸಿ) |
ಒಟ್ಟು ಹುದ್ದೆಗಳು | 169 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ |
ಕಿರಿಯ ಇಂಜಿನಿಯರ್ (ಸಿವಿಲ್) : 166 ಕಿರಿಯ ಇಂಜಿನಿಯರ್ (ಮೆಕ್ಯಾನಿಕಲ್) : 03 |
ವಿದ್ಯಾರ್ಹತೆ:
ಕರ್ನಾಟಕ ಲೋಕಸೇವಾ ಆಯೋಗ ಜಲ ಸಂಪನ್ಮೂಲ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ
ಕಿರಿಯ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ಅಭ್ಯರ್ಥಿಗಳು ಡಿಪ್ಲೊಮ ಇನ್ ಸಿವಿಲ್ ಇಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು.
ಕಿರಿಯ ಇಂಜಿನಿಯರ್ (ಮೆಕ್ಯಾನಿಕಲ್) ಹುದ್ದೆಗಳಿಗೆ ಅಭ್ಯರ್ಥಿಗಳು ಡಿಪ್ಲೊಮ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಕೆಗೆ ಕನಿಷ್ಠ 18 ವರ್ಷ ಪೂರೈಸಿರಬೇಕು.
ಗರಿಷ್ಠ 35 ವರ್ಷ ವಯೋಮಿತಿ ಮೀರಿರಬಾರದು.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ವಯೋಮಿತಿ.
ಎಸ್‌ಸಿ / ಎಸ್‌ಟಿ / ಪ್ರ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ.
ಉದ್ಯೋಗ ಸುದ್ದಿ – ಕೆಎಂಎಫ್ ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ
ವೇತನಶ್ರೇಣಿ:
ಕರ್ನಾಟಕ ಲೋಕಸೇವಾ ಆಯೋಗ ಜಲ ಸಂಪನ್ಮೂಲ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.33,450- 62,600.
ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ರೂ.600.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.300.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50.
ಎಸ್‌ಸಿ / ಎಸ್‌ಟಿ / ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ರೂ.35 ರ ಅರ್ಜಿ ಪ್ರಕ್ರಿಯೆ ಶುಲ್ಕವನ್ನು ಎಲ್ಲ ಅಭ್ಯರ್ಥಿಗಳು ಕಡ್ಡಾಯವಾಗಿ ಪಾವತಿಸಬೇಕು.
ಉದ್ಯೋಗ ಸುದ್ದಿ – ಕೆಎಂಎಫ್ ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ
ಆಯ್ಕೆ ವಿಧಾನ:
ಕರ್ನಾಟಕ ಲೋಕಸೇವಾ ಆಯೋಗ ಜಲ ಸಂಪನ್ಮೂಲ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ನೇರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಸಲಾಗುತ್ತದೆ. ಪರೀಕ್ಷೆ ಮಾದರಿಯನ್ನು ಈ ಕೆಳಗಿನಂತೆ ಗಮನಿಸಬಹುದು.
- ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಯಾರೇ ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆಯದ ಹೊರತು ಆಯ್ಕೆಗೆ ಅರ್ಹರಲ್ಲ. ಈ ಪರೀಕ್ಷೆಯನ್ನು ಗರಿಷ್ಠ 150 ಅಂಕಗಳಿಗೆ ನಡೆಸಲಿದ್ದು, ಅಭ್ಯರ್ಥಿಯು ಈ ಪತ್ರಿಕೆಯಲ್ಲಿ ಅರ್ಹತೆ ಹೊಂದಲು ಕನಿಷ್ಠ 50 ಅಂಕಗಳನ್ನು ಗಳಿಸಬೇಕು.
- ಈ ಪ್ರಶ್ನೆ ಪತ್ರಿಕೆಯನ್ನು ಎಸ್‌ಎಸ್‌ಎಲ್‌ಸಿ ಹಂತದಲ್ಲಿನ ಪ್ರಥಮ ಭಾಷೆ ಕನ್ನಡವನ್ನು ಮಾನದಂಡವನ್ನಾಗಿಕೊಂಡು ಸಿದ್ಧಪಡಿಸಲಾಗುವುದು.
- ಸ್ಪರ್ಧಾತ್ಮಕ ಪರೀಕ್ಷೆ
ಸ್ಪರ್ಧಾತ್ಮಕ ಪರೀಕ್ಷೆಯು ತಲಾ 100 ಅಂಕಗಳಿಗೆ ಎರಡು ಲಿಖಿತ ಪ್ರಶ್ನೆ ಪತ್ರಿಕೆಗಳನ್ನು ಒಳಗೊಂಡಿದ್ದು, ವಸ್ತುನಿಷ್ಠ ಬಹು ಆಯ್ಕೆ ಮಾದರಿಯಲ್ಲಿ ಇರುತ್ತದೆ. - ಪ್ರತಿ ಪ್ರಶ್ನೆಯು ಋಣಾತ್ಮಕ ಅಂಕದ ಸ್ವರೂಪದ್ದಾಗಿದ್ದು, ಪ್ರತಿಯೊಂದು ತಪ್ಪಾದ ಉತ್ತರಕ್ಕೆ ಪ್ರಶ್ನೆಗಳಿಗೆ ಹಂಚಿಕೆ ಮಾಡಲಾದ ಅಂಕಗಳಲ್ಲಿ ನಾಲ್ಕನೇ ಒಂದು ಭಾಗವನ್ನು ಕಡಿತಗೊಳಿಸಲಾಗುವುದು. ಪ್ರಶ್ನೆ ಪತ್ರಿಕೆ ವಿಷಯ, ಅಂಕಗಳು, ಪರೀಕ್ಷೆ ಸಮಯ ಈ ಕೆಳಗಿನಂತಿದೆ.
- ಪತ್ರಿಕೆ – 1: ಸಾಮಾನ್ಯ ಪತ್ರಿಕೆ (100 ಅಂಕಗಳಿಗೆ ಪರೀಕ್ಷೆ)
ಪತ್ರಿಕೆ – 2: ನಿರ್ದಿಷ್ಟ ಪತ್ರಿಕೆ (100 ಅಂಕಗಳಿಗೆ ಪರೀಕ್ಷೆ)
ಪ್ರಮುಖ ವೇಳಾಪಟ್ಟಿ
ಅಪ್ಲಿಕೇಶನ್ ಸಲ್ಲಿಸಲು ಪ್ರಾರಂಭಿಕ ದಿನಾಂಕ: 19-10-2022
ಅಪ್ಲಿಕೇಶನ್ ಸಲ್ಲಿಸಲು ಕೊನೆ ದಿನಾಂಕ: 17-11-2022
ಅಪ್ಲಿಕೇಶನ್ ಶುಲ್ಕವನ್ನು ಪಾವತಿಸಲು ಅಂತಿಮ ದಿನಾಂಕ: 18-11-2022
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 19-10-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 17-11-2022 |
ಅಪ್ಲಿಕೇಶನ್ ಶುಲ್ಕವನ್ನು ಪಾವತಿಸಲು ಅಂತಿಮ ದಿನಾಂಕ | 18-11-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |